ಬುಧವಾರ, ಅಕ್ಟೋಬರ್ 23, 2019
22 °C

ಸಮಾರೋಪಕ್ಕೆ ಪ್ರಧಾನಿ ಗೈರು

Published:
Updated:

ಭುವನೇಶ್ವರ: ಮುಂದಿನ ವರ್ಷ ಕೋಲ್ಕತ್ತದಲ್ಲಿ ನಡೆಯಲಿರುವ ನೂರನೇ ಭಾರತೀಯ ವಿಜ್ಞಾನ ಸಮಾವೇಶದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ ನಡೆಯಲಿರುವ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂಬ ವಿಷಯ ಜಿಜ್ಞಾಸೆಗೆ ಕಾರಣವಾಗಿದೆ.ಸಮಾರೋಪದಲ್ಲಿ ಅವರು ನೂರನೇ ವಿಜ್ಞಾನ ಸಮಾವೇಶದ ಅಧಿಕಾರ ಸ್ವೀಕರಿಸಬೇಕಿತ್ತು. ಅನಿವಾರ್ಯ ಕಾರಣಗಳಿಂದ ಅವರು ಆಗಮಿಸುತ್ತಿಲ್ಲ. ಏಪ್ರಿಲ್ 1ರಂದು ಪ್ರಧಾನಿ ತಮ್ಮಿಂದ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸಮಾವೇಶದ ಅಧ್ಯಕ್ಷತೆ ವಹಿಸಿರುವ ಸಮಾವೇಶ ಸಮಿತಿಯ ಪ್ರಧಾನ ಕಾರ್ಯದರ್ಶಿ ಗೀತಾ ಬಾಲಿ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.  ಈ ಹಿಂದೆಯೂ ಅನೇಕ ಪ್ರಧಾನ ಕಾರ್ಯದರ್ಶಿಗಳು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)