ಮಂಗಳವಾರ, ಜೂನ್ 15, 2021
27 °C

ಸಮಾವೇಶ ಶಕ್ತಿ ಪ್ರದರ್ಶನವಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ:  `ನಗರದಲ್ಲಿ ಭಾನುವಾರ ನಡೆಯಲಿರುವ ಸಮಾವೇಶ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿನಂದನಾ ಸಮಾರಂಭವೇ ಹೊರತು ಶಕ್ತಿ ಪ್ರದರ್ಶನವಲ್ಲ~ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.



ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಅವರು ವರದಿಗಾರರ ಜತೆ ಮಾತನಾಡಿದರು. `ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಸೇರಿದಂತೆ ಎಲ್ಲರಿಗೂ ಆಹ್ವಾನ ಹೋಗಿದೆ~ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.



`ಹೈಕೋರ್ಟ್ ತೀರ್ಪಿನಿಂದ ಯಡಿಯೂರಪ್ಪ ನಿರಾಳರಾಗಿದ್ದಾರೆ. ಅವರಿಗೆ ಸ್ಥಾನಮಾನ ನೀಡುವ ವಿಷಯ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ಅವರ ಮೇಲೆ ಯಾವುದೇ ಒತ್ತಡ ಹೇರುವ ಪ್ರಶ್ನೆಯೇ ಇಲ್ಲ~ ಎಂದು ಅವರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.