ಗುರುವಾರ , ಮೇ 13, 2021
16 °C

`ಸಮಿತಿ ರಚನೆ: ಕಾಲಹರಣ ತಂತ್ರ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪುರ: ಜನಸಾಮಾನ್ಯರ ಸಮಸ್ಯೆ ಪರಿಹರಿಸುವ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಫೆಬ್ರುವರಿಯಲ್ಲಿ ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಿದ್ದವು. ಮುಷ್ಕರ ಗಂಭೀರತೆಯನ್ನು ಗಮನಿಸಿದ ಕೇಂದ್ರ ಸರ್ಕಾರ ರಚಿಸಿದ ನಾಲ್ಕು ಕೇಂದ್ರ ಸಚಿವರ ಸಮಿತಿಯು ಕೇವಲ ಕಾಲಹರಣ ತಂತ್ರವಾಗಿದೆ ಎಂದು ಆರೋಪಿಸಿ ಸಿ.ಐ.ಟಿ.ಯು ಸದಸ್ಯರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.ಕಾರ್ಮಿಕರ ಭವಿಷ್ಯ ನಿಧಿ ಕಚೇರಿಯ ಎದುರು ಘೋಷಣೆ ಹಾಕಿದ ಸದಸ್ಯರು, ಸರ್ಕಾರದ ನಿರ್ಲಕ್ಷ್ಯಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಬೆಲೆ ನಿಯಂತ್ರಣ, ಕಾರ್ಮಿಕರಿಗೆ ಕನಿಷ್ಠ ವೇತನ ಸೇರಿದಂತೆ ಹತ್ತು ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗಿದ್ದು, ಇದನ್ನು ಪರಿಹರಿಸುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್.ಗೋಪಾಲಗೌಡ ದೂರಿದರು.ಭವಿಷ್ಯ ನಿಧಿ ರಕ್ಷಣೆ ಮತ್ತು ವಿತರಣೆ ಪಾರದರ್ಶಕವಾಗಿರಬೇಕು. ಕಾರ್ಮಿಕರಿಗೆ ಹಣ ವಿತರಣೆ ಕಾಲಮಿತಿಯೊಳಗೆ ಆಗಬೇಕು. ಭವಿಷ್ಯ ನಿಧಿ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಪಿ.ಮುನಿರಾಜು ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.