ಶುಕ್ರವಾರ, ಮೇ 7, 2021
20 °C

ಸಮುದಾಯದತ್ತ ಶಾಲೆ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಮಕ್ಕಳ ಕಲಿಕಾ ಪ್ರಗತಿ ಮತ್ತು ಶೈಕ್ಷಣಿಕ ಗುಣಮಟ್ಟದ ಬಗೆಗೆ ಪಾಲಕರೊಂದಿಗೆ ಚರ್ಚಿಸಲು ಇದೇ 7 ಮತ್ತು 10ರಂದು ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢಶಿಕ್ಷಣ) ಹನುಮಂತರಾಯಪ್ಪ ತಿಳಿಸಿದ್ದಾರೆ.



 ಶಾಲೆಯಲ್ಲಿ ಕಾಲಕಾಲಕ್ಕೆ ನಡೆಯುವ ಕಿರು ಪರೀಕ್ಷೆಗಳು ಹಾಗೂ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶವನ್ನು ಆಧರಿಸಿ, ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ಪಾಲಕರು, ಶಿಕ್ಷಕರೊಂದಿಗೆ ಹೇಗೆ ಶ್ರಮಿಸಬೇಕೆಂದು ಸಮುದಾಯದತ್ತ ಶಾಲೆ ಯ ಕಾರ್ಯಕ್ರಮದ ಮೂಲಕ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.



ಪ್ರಾಥಮಿಕ ಶಾಲೆಗಳಲ್ಲಿ ಇದೇ 7ರಂದು ಹಾಗೂ ಪ್ರೌಢಶಾಲೆಗಳಲ್ಲಿ 10ರಂದು ಪ್ರತಿ ತರಗತಿಗೂ ಪ್ರತ್ಯೇಕ ಸಮಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.