`ಸಮುದಾಯ ಭವನಕ್ಕೆ ಕೋಟಿ ರೂ.'

7

`ಸಮುದಾಯ ಭವನಕ್ಕೆ ಕೋಟಿ ರೂ.'

Published:
Updated:
`ಸಮುದಾಯ ಭವನಕ್ಕೆ ಕೋಟಿ ರೂ.'

ಕಾರವಾರ: `ಕೊಂಕಣ ಮರಾಠ ಹಾಗೂ ಕೋಮಾರಪಂಥ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ನೀಡಲಾಗುವುದು' ಎಂದು ಮೀನುಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಆನಂದ ಅಸ್ನೋಟಿಕರ್ ಹೇಳಿದರು.ಇಲ್ಲಿಯ ಮಯೂರವರ್ಮ ವೇದಿಕೆಯಲ್ಲಿ ಬುಧವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, `ಕ್ಷೇತ್ರದಲ್ಲಿ ಇತರೆ ಸಮುದಾಯದವರು ಸಮುದಾಯ ಭವನಕ್ಕೆ ಬೇಡಿಕೆ ಇಟ್ಟರೆ ಅನುದಾನ ದೊರಕಿಸಿಕೊಡಲು ಪ್ರಯತ್ನ ಮಾಡುತ್ತೇನೆ' ಎಂದರು.`ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎನ್ನುವ ಪ್ರಸ್ತಾವವನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿದೆ. ಈ ಕುರಿತು ಮುಖ್ಯಮಂತ್ರಿಯವರು ಪ್ರಧಾನಮಂತ್ರಿಗಳ ಮೇಲೆ ಮತ್ತಷ್ಟು ಒತ್ತಡ ತಂದು ಹಾಲಕ್ಕಿ ಸಮುದಾಯದ ದಶಕಗಳ ಬೇಡಿಕೆ ಈಡೇರಿಸಬೇಕು' ಎಂದು ಮನವಿ ಮಾಡಿದರು.`ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯ ಮತ್ತು ಕ್ಷೇತ್ರದ ಹಿಂದುಳಿದವರ ಅಭಿವೃದ್ಧಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೊಸಾಳಿ-ಮುಡಗೇರಿ ಕುಡಿಯುವ ನೀರಿನ ಯೋಜನೆ ಮುಕ್ತಾಯದ ಹಂತದಲ್ಲಿದೆ. ಕೆರವಡಿ-ಶಿರವಾಡ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹಂತದಲ್ಲಿದೆ' ಎಂದು ಅವರು ಹೇಳಿದರು.`ಅಂಕೋಲಾ ತಾಲ್ಲೂಕಿನ ಬೆಳಂಬರ, ಬೇಲೆಕೇರಿ, ಕೇಣಿ ಕಾರವಾರ ತಾಲ್ಲೂಕಿನ ಅಮದಳ್ಳಿ ಬಂದು ಅಭಿವೃದ್ಧಿಗೆ ಆರ್ಥಿಕ ನೆರವು ನೀಡಲಾಗಿದೆ' ಎಂದು ಅಸ್ನೋಟಿಕರ್ ಹೇಳಿದರು.`ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜು ನಿರ್ಮಾಣ ಆಗುತ್ತಿದೆ. ಈಗಾಗಲೇ  22 ಕೋಟಿ ರೂಪಾಯಿ ಅನುದಾನ ಬಿಡುಗಡೆ ಆಗಿದೆ. ಉತ್ತಮ ದರ್ಜೆಯ ಕಾಲೇಜು ಇಲ್ಲಿ ಸ್ಥಾಪನೆ ಆಗಲಿದೆ ಎನ್ನುವ ವಿಶ್ವಾಸ ನನಗಿದೆ' ಎಂದು ಅಸ್ನೋಟಿಕರ್ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry