ಮಂಗಳವಾರ, ಜೂನ್ 15, 2021
22 °C

ಸಮುದಾಯ ಭವನ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ  ಜಿಲ್ಲಾ ಯಾದವ್ ಸಂಘದ ಆವರಣದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿದ ಸಮುದಾಯ ಭವನದ ಉದ್ಘಾಟನೆ ಹಾಗೂ ಕೃಷ್ಣ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಈಚೆಗೆ ನಡೆಯಿತು.ಉದ್ಘಾಟನೆ ನೆರವೇರಿಸಿದ ಶಾಸಕ ಸಯ್ಯದ್ ಯಾಸಿನ್ ಮಾತನಾಡಿ, ಹಿಂದುಳಿದ ಸಮಾಜವು ಸಮಾಜದ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ದೊರಕಿಸಿಕೊಡುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.ಮುಖ್ಯಅತಿಥಿಯಾಗಿ ಆಗಮಿಸಿದ್ದ ಸುರಪುರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವಿಠಲ್ ಯಾದವ್ ಮಾತನಾಡಿ, ಯಾದವ ಸಮಾಜಕ್ಕೆ ಯಾವುದೇ ಜನಪ್ರತಿನಿಧಿಗಳು ಅನುದಾನವನ್ನು ನೀಡಿರಲಿಲ್ಲ.

 

ಆದರೆ, ಸಯ್ಯದ್ ಯಾಸಿನ್ ಅವರು ಯಾದವ ಸಮಾಜಕ್ಕೆ ನೀಡಿರುವುದು  ಶ್ಲಾಘನೀಯ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಜಿಲ್ಲಾ ಯಾದವ ಸಂಘದ ಅಧ್ಯಕ್ಷ ಕೆ.ಹನುಮಂತಪ್ಪ ವಹಿಸಿದ್ದರು. ಪ್ರಾಸ್ತಾವಿಕವಾಗಿ ಜಿ.ಹನುಮಂತಪ್ಪ ಮಾತನಾಡಿದರು.ನಗರಸಭೆ ಮಾಜಿ ಅಧ್ಯಕ್ಷ ಎ.ಮಾರೆಪ್ಪ ವಕೀಲ, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ತಿಮ್ಮಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೆಂಕಣ್ಣ ಯಾದವ್, ಆರ್‌ಡಿಎ ಮಾಜಿ ಅಧ್ಯಕ್ಷ ಕಮಾಂಡರ್ ತಿಮ್ಮಾರೆಡ್ಡಿ, ತಾಪಂ ಮಾಜಿ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಗಟ್ಟುತಿಮ್ಮಪ್ಪ ಯಾದವ್, ಹನುಮಂತರಾಯ ಚೂರಿ, ಗಟ್ಟು ಬೀಚಣ್ಣ ಯಾದವ್, ಕೃಷ್ಣಪ್ಪ ಆರ್,ಜನಾರ್ದನರೆಡ್ಡಿ, ಧನರಾಜ್, ಪಿ.ತಿಮ್ಮಪ್ಪ ಯಾದವ್, ದಾನಪ್ಪ, ಸೂರ್ಯಪ್ರಕಾಶ, ಶರಣಪ್ಪ ಬಿ, ಲಕ್ಷ್ಮಣ, ಪೂಜಾರಿ ತಿಪ್ಪಣ್ಣ, ರಾಘವೇಂದ್ರ ಯಾದವ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು. ಹುಸನಪ್ಪ ಯಾದವ್ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.