ಸಮುದಾಯ ಹಕ್ಕುಗಳ ಸಂಗಮ ಆರಂಭ

7

ಸಮುದಾಯ ಹಕ್ಕುಗಳ ಸಂಗಮ ಆರಂಭ

Published:
Updated:
ಸಮುದಾಯ ಹಕ್ಕುಗಳ ಸಂಗಮ ಆರಂಭ

ಕುಶಾಲನಗರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ `ರಾಷ್ಟ್ರೀಯ ಸಮುದಾಯ ಹಕ್ಕುಗಳ ಸಂಗಮ -2011~ ಸಮಾವೇಶ ಭಾನುವಾರ ಆರಂಭಗೊಂಡಿತು.ರಾಷ್ಟ್ರೀಯ ಆದಿವಾಸಿ ಆಂದೋಲನ, ಕುಶಾಲನಗರ ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ (ಕಾರ್ಡ್), ಕೊಡಗು ಜಿಲ್ಲಾ ಬುಡಕಟ್ಟು ಕೃಷಿಕರ ಸಂಘ, ಇನ್ಸಾಫ್, ಲೋಕಶಕ್ತಿ ಅಭಿಯಾನ ಸೇರಿದಂತೆ ದೇಶದ ವಿವಿಧ ಸಮುದಾಯ ಹಕ್ಕುಗಳ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ  15 ರಾಜ್ಯಗಳಿಂದ ಆಗಮಿಸಿರುವ ವಿವಿಧ ಸಮುದಾಯದವರು ತಮ್ಮ ಹಕ್ಕುಗಳ ರಕ್ಷಣೆಗಾಗಿ ಒಕ್ಕೊರಲಿನಿಂದ ಒತ್ತಾಯಿಸಿದರು.ಕೊಡಗು ಜಿಲ್ಲಾ ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಜೆ.ಪಿ.ರಾಜು ಮಾತನಾಡಿ, ಸಮುದಾಯದ ಸಂಪನ್ಮೂಲಗಳಾದ ಭೂಮಿ, ನೀರು ಮತ್ತು ಅರಣ್ಯದ  ಮೇಲೆ ಸಂವಿಧಾನಾತ್ಮಕವಾಗಿ ಸಮುದಾಯಕ್ಕೆ ಸಿಗಬೇಕಾಗಿರುವ ಹಕ್ಕುಗಳ ಬಗ್ಗೆ ಹೋರಾಟ ನಡೆಸಲು ಈ ಸಂಗಮ ಸಹಕಾರಿಯಾಗಿದೆ ಎಂದರು.ಸಮಾವೇಶದ ಸಂಚಾಲಕ ವಿ.ಎಸ್. ರಾಯ್‌ಡೇವಿಡ್, ಹುಣಸೂರು ಡೀಡ್ ಸಂಸ್ಥೆ ನಿರ್ದೇಶಕ ಶ್ರೀಕಾಂತ್, ಬುಡಕಟ್ಟು ಕೃಷಿಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಆರ್.ಕೆ.ಚಂದ್ರು, ಜೆ.ಕೆ.ರಾಮು, ಕುಡಿಯರ ಮುತ್ತಪ್ಪ, ಜಿಲ್ಲಾ ಕಾರ್ಯದರ್ಶಿ ಪಿ.ಎಸ್.ಮುತ್ತ, ವೆಂಕಟಸ್ವಾಮಿ ಸೇರಿದಂತೆ ಪ್ರಮುಖರು ಸಂಗಮದಲ್ಲಿ ಭಾಗವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry