ಬೆಂಗಳೂರು: `ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ಸರ್ಕಾರ, ನನ್ನ ಬೆಂಬಲದಿಂದ ಮುನ್ನಡೆಯುತ್ತಿರುವ ಸಮ್ಮಿಶ್ರ ಸರ್ಕಾರ. ನನ್ನೊಂದಿಗೆ ಗುರುತಿಸಿಕೊಂಡಿರುವ ಶಾಸಕರನ್ನು ಕೆಣಕಿದರೆ ಸರ್ಕಾರ ಉಳಿಯುವುದಿಲ್ಲ. ಸರ್ಕಾರ ಉಳಿಸಿಕೊಳ್ಳುವುದು ಬಿಜೆಪಿ ಮುಖಂಡರಿಗೆ ಬಿಟ್ಟಿದ್ದು~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಗುಡುಗಿದರು.

ಜನಸಂಪರ್ಕ ಕಚೇರಿಯಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ ಗುರುವಾರ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ನನ್ನ ಬೆಂಬಲದಿಂದ ಸರ್ಕಾರ ಮುನ್ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ. ಜನತೆ ಕೂಡ ಇದೇ ರೀತಿ ಮಾತನಾಡುತ್ತಿದ್ದಾರೆ. ಇಷ್ಟಾದರೂ ಬಿಜೆಪಿ ಮುಖಂಡರು ನನ್ನ ಬೆಂಬಲಿಗರಿಗೆ ತೊಂದರೆ ನೀಡುವುದನ್ನು ಮುಂದುವರಿಸಿದರೆ ಈ ಸರ್ಕಾರ ಅವಧಿ ಪೂರೈಸುವುದಿಲ್ಲ~ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

`ನಾವಾಗಿಯೇ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ. ಆದರೆ ನಾನು ಏರ್ಪಡಿಸಿದ್ದ ಭೋಜನ ಕೂಟಕ್ಕೆ ಬಂದಿದ್ದರು ಎಂಬ ಕಾರಣಕ್ಕಾಗಿ ಬೆಂಬಲಿಗರಿಗೆ ಕಿರುಕುಳ ನೀಡಿದರೆ ಸುಮ್ಮನಿರುವುದಿಲ್ಲ~ ಎಂದು ಆವೇಶದಿಂದ ನುಡಿದರು.
`ಮೊದಲಿನಿಂದಲೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣವಿತ್ತು. ಈಗಲೂ ಅದೇ ಪರಿಸ್ಥಿತಿ ಇದೆ. ಹೇಗಿದ್ದರೂ ಕೆಲವೇ ದಿನಗಳಲ್ಲಿ ಪಕ್ಷ ತೊರೆಯಲಿದ್ದೇನೆ. ಅಲ್ಲಿಯವರೆಗೂ ಇವೆಲ್ಲ ಸಹಿಸಿಕೊಂಡು ಹೋಗುತ್ತೇನೆ~ ಎಂದರು.

ಷಡ್ಯಂತ್ರ: ಹಾವೇರಿ ಸಮಾವೇಶಕ್ಕೆ ಸಚಿವರು, ಶಾಸಕರು ಹೋಗಬಾರದು ಎಂಬ ಷಡ್ಯಂತ್ರದಿಂದ ಸರ್ಕಾರವು, ಸಮಾವೇಶ ಸಂದರ್ಭದಲ್ಲೇ ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಸಲು ತೀರ್ಮಾನಿಸಿದೆ ಎಂದು ಟೀಕಿಸಿದರು.

ಸಚಿವರು, ಶಾಸಕರಿಗೆ ಸಮಾವೇಶದಲ್ಲಿ ಭಾಗವಹಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಡಿಸೆಂಬರ್ 10ಕ್ಕೆ ಬದಲಾಗಿ 9ರಂದೇ ಉದ್ದೇಶಿತ ಕರ್ನಾಟಕ ಜನತಾ ಪಕ್ಷದ ಸಮಾವೇಶವನ್ನು ಹಾವೇರಿಯಲ್ಲಿ ಏರ್ಪಡಿಸಲಾಗಿದೆ.

ಅದರಲ್ಲಿ ಭಾಗವಹಿಸುವಂತೆ ಯಾರನ್ನೂ ಬಲವಂತ ಮಾಡುವುದಿಲ್ಲ. ಇಷ್ಟ ಇರುವವರು ಬರಬಹುದು, ಇಲ್ಲದವರು ಬಿಡಬಹುದು. ಜನಬೆಂಬಲದ ಮೇಲೆ ಹೊಸ ಪಕ್ಷವನ್ನು ಸಂಘಟಿಸುತ್ತೇನೆ. ಈಗಾಗಲೇ ಎಲ್ಲ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಜನ ಬದಲಾವಣೆ ಬಯಸಿದ್ದಾರೆ. ಅದನ್ನು ನಮ್ಮ ಪಕ್ಷದಿಂದ ತರಬಹುದು ಎಂಬ ನಿರೀಕ್ಷೆ ಇದೆ. ಜನ ನಮ್ಮನ್ನು ನೋಡುವ ದೃಷ್ಟಿಕೋನವೇ ಬೇರೆ. ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಎದುರಿಸುತ್ತಿದ್ದ ಕಷ್ಟಗಳನ್ನು ನೋಡಿ ಅವರು ಗೆಲ್ಲುವುದಿಲ್ಲ ಎಂದು ಅನಿಸುತ್ತಿತ್ತು. ಆದರೆ ಎಲ್ಲರೂ ಆಶ್ಚರ್ಯಪಡುವ ರೀತಿಯಲ್ಲಿ ಎರಡನೇ ಬಾರಿಗೆ ಜಯಗಳಿಸಿದರು ಎನ್ನುವ ಮೂಲಕ ಪರೋಕ್ಷವಾಗಿ ಕೆಜೆಪಿಗೂ ಅದೇ ರೀತಿ ಜನಬೆಂಬಲ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಸಭೆ: ಕರ್ನಾಟಕ ಜನತಾ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಶುಕ್ರವಾರ ನಡೆಯಲಿದ್ದು, ಹಿರಿಯ ಮುಖಂಡ ವಿ.ಧನಂಜಯಕುಮಾರ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅವರು ಹೇಳಿದರು.

ಬಿಜೆಪಿಯ ಹಿರಿಯ ಮುಖಂಡ ಕೆ.ಎಚ್.ಶ್ರೀನಿವಾಸ ಅವರು ಕೆಜೆಪಿ ಸೇರುವುದು ಖಚಿತವಾಗಿದೆ. ಅವರು ಪಕ್ಷದ ಹಿರಿಯ ಉಪಾಧ್ಯಕ್ಷರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

`ಸೂಪರ್ಸೀಡ್ ಮಾಡುತ್ತಿದ್ದೆ~
ಬೆಂಗಳೂರು: ಕಸ ವಿಲೇವಾರಿ ಮಾಡುವಲ್ಲಿ ವಿಫಲವಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ನಾನು ಮುಖ್ಯಮಂತ್ರಿ ಆಗಿದ್ದರೆ ಸೂಪರ್ಸೀಡ್ ಮಾಡುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದರು.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸ ವಿಲೇವಾರಿ ಸಮಸ್ಯೆ ಬಗೆಹರಿಸುವ ಯೋಗ್ಯತೆ ಇಲ್ಲದವರನ್ನು ಪಾಲಿಕೆಯ ಸದಸ್ಯರನ್ನಾಗಿ ಆಯ್ಕೆ ಮಾಡಿದ್ದು ನಿಜಕ್ಕೂ ದುರದೃಷ್ಟಕರ. ಆಡಳಿತ ನಡೆಸುವವರು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಾರೆ. ಆದರೆ ಕಸ ವಿಲೇವಾರಿ ಮಾಡಿಸುವ ಯೋಗ್ಯತೆ ಇಲ್ಲ. ಅಂತಹವರು ಸರಿಯಾಗಿ ಆಡಳಿತ ಮಾಡುತ್ತಾರೆಯೇ ಎಂದು ರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.