ಸೋಮವಾರ, ಜನವರಿ 20, 2020
17 °C

ಸಮ್ಮೇಳನಾಧ್ಯಕ್ಷರಾಗಿ ಪುಸ್ತಕಮನೆ ಹರಿಹರಪ್ರಿಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ `ಪುಸ್ತಕಮನೆ~ ಹರಿಹರಪ್ರಿಯ ಆಯ್ಕೆಯಾಗಿದ್ದಾರೆ.

 ಜನವರಿ 22 ರಂದು  ಕೆಂಗೇರಿಯ ಕೃಷ್ಣಪ್ರಿಯ ಸಭಾಂಗಣದಲ್ಲಿ  ಸಮ್ಮೇಳನ ನಡೆಯಲಿದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್ ಸುಧೀಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಳೆದ 45 ವರ್ಷಗಳಿಂದ ಸಾಹಿತ್ಯ ಮತ್ತು ಪ್ರಕಾಶನದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹರಿಹರ ಪ್ರಿಯರು ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಈವರೆಗೂ ಸುಮಾರು 40 ಪುಸ್ತಕಗಳನ್ನು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಪ್ರಕಟಿಸಿದ್ದಾರೆ.

 

ಪ್ರತಿಕ್ರಿಯಿಸಿ (+)