ಶುಕ್ರವಾರ, ಜೂನ್ 25, 2021
30 °C

ಸರಕು ಸಾಗಣೆ: ಶೇ 30 ಅಧಿಕ ಆದಾಯ ನಿರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಹೆಚ್ಚಿನ ಸರಕು ಸಾಗಣೆಯಿಂದ ಮುಂದಿನ ಹಣಕಾಸು ವರ್ಷದಲ್ಲಿ ರೈಲ್ವೆಗೆ ಶೇಕಡಾ 30ರಷ್ಟು ಹೆಚ್ಚಿನ ಆದಾಯ ಬರುವ ನಿರೀಕ್ಷೆ ಇದೆ.



ರೈಲ್ವೆ ಸಚಿವರು ಈ ಸಲ ಬಜೆಟ್‌ನಲ್ಲಿ ಸರಕು ಸಾಗಣೆಯ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂದಿನ ಹಣಕಾಸು ವರ್ಷದಲ್ಲಿ 1,025 ದಶಲಕ್ಷ ಟನ್ ಸರಕು ಸಾಗಿಸಿ 89,339 ಕೋಟಿ ಆದಾಯ ಗಳಿಸುವ ನಿರೀಕ್ಷೆ ಹೊಂದಿದ್ದಾರೆ. ಕರ್ನಾಟಕ ಮತ್ತು ಒಡಿಶಾದಲ್ಲಿ ಕಬ್ಬಿಣ ಅದಿರು ರಫ್ತಿನ ಮೇಲೆ ನಿಷೇಧ ಹೇರಿರುವುದರಿಂದ ಈ ಬಾಬ್ತಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸರಕು ಸಾಗಣೆಯಾಗದೆ ಆದಾಯದಲ್ಲಿ ಕಡಿತ ಉಂಟಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.