ಸರಗಳವು: ಇರಾನಿ ಗ್ಯಾಂಗ್ನ 6 ಮಂದಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಸರಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇರಾನಿ ಗ್ಯಾಂಗ್ನ ಆರು ಮಂದಿಗೆ ಬೆಳಗಾವಿಯ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ವೆಂಕಟೇಶ ನಾಯಕ ಅವರು ಆರೋಪಿಗಳಾದ ಮಹಮದ್ ಇರಾನಿ, ಶಾರುಕ್ ಶೇಖ್, ಅಬ್ಬಾಸ್ ಇರಾನಿ, ಹೈದರ್ ಇರಾನಿ, ರಫಿಕ್ ಶೇಖ್ ಮತ್ತು ಸಲೀಂ ಶೇಖ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದರು.
ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಐ.ಮಕಾಂದರ ವಾದ ಮಂಡಿಸಿದ್ದರು. ಆರೋಪಿಗಳು ಬೆಳಗಾವಿ ನಗರದಲ್ಲಿ 2015ರಲ್ಲಿ 33 ಕಡೆ ಸರಗಳವು ಮಾಡಿದ್ದರು. ಬಳಿಕ ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಲಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.