ಸರಗಳ್ಳನಿಗೆ ಗುಂಡೇಟು

7

ಸರಗಳ್ಳನಿಗೆ ಗುಂಡೇಟು

Published:
Updated:

ಬೆಂಗಳೂರು: ಸರ ದೋಚಿ ಪರಾರಿಯಾಗುತ್ತಿದ್ದ ದುಷ್ಕರ್ಮಿಯ ಮೇಲೆ ಜಯನಗರ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ ಘಟನೆ ಜಯನಗರ 8ನೇ ಬ್ಲಾಕ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ.  ಕನಕಪುರದ ವಿಜಯಕುಮಾರ್‌ಗುಂಡೇಟಿನಿಂದ ಗಾಯಗೊಂಡ ಆರೋಪಿ. ಆತ ಜಯನಗರದ ಲಕ್ಷ್ಮಣರಾವ್ ಉದ್ಯಾನದ ಬಳಿ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ವೇಳೆ ಇನ್‌ಸ್ಪೆಕ್ಟರ್ ಎಸ್.ಕೆ. ಉಮೇಶ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.  ಗಾಯಗೊಂಡ ಸರಗಳ್ಳನನ್ನು ಸಂಜಯಗಾಂಧಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಮೂಲದ ಬಗ್ಗೆ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry