ಸರಣಿ ಅಪಘಾತ: ಮಹಿಳೆ ಸಾವು

7

ಸರಣಿ ಅಪಘಾತ: ಮಹಿಳೆ ಸಾವು

Published:
Updated:
ಸರಣಿ ಅಪಘಾತ: ಮಹಿಳೆ ಸಾವು

ರಾಮನಗರ: ಕುಂಬಳಗೋಡು ಬಳಿಯ ಕಣಿಮಿಣಿಕೆಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಬಸ್, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಒಬ್ಬರು ಮಹಿಳೆ ಸಾವನ್ನಪ್ಪಿದ್ದಾರೆ.ಹತ್ತು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು, ಮೃತರನ್ನು ಯಲಹಂಕ ನಿವಾಸಿ ಉಮಾದೇವಿ (37) ಎಂದು ಗುರುತಿಸಲಾಗಿದೆ. ಬಸ್‌ನ ನಿರ್ವಾಹಕಿ ಭಾಗ್ಯಮ್ಮ ಹಾಗೂ ಪ್ರಯಾಣಿಕ ಶ್ರೀಕಾಂತ್ ಎಂಬುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ತಿಳಿಸಿದ್ದಾರೆ.ಮೈಸೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಂದಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಆ ಲಾರಿಯು ಅದರ ಮುಂದಿದ್ದ ಇಂಡಿಕಾ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂರು ಜನರನ್ನು ಬಿಜಿಎಸ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry