ಭಾನುವಾರ, ಜೂನ್ 13, 2021
25 °C

ಸರಣಿ ಅಪಘಾತ: ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಹೆಸರಘಟ್ಟ ರಸ್ತೆಯಲ್ಲಿ ಭಾನುವಾರ ರಾತ್ರಿ ಕಾರು ಚಾಲಕನೊಬ್ಬ ಪಾನಮತ್ತನಾಗಿ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂರು ಮಂದಿ ಗಾಯಗೊಂಡಿದ್ದಾರೆ.ಪಾನಮತ್ತನಾಗಿ ಹೆಸರಘಟ್ಟ ಕಡೆಯಿಂದ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ವಾಹನ ಗುದ್ದಿಸಿದ್ದಾನೆ.

ನಂತರ ಪಕ್ಕದ ರಸ್ತೆಗೆ ನುಗ್ಗಿದ ಕಾರು ಎದುರುಗಡೆಯಿಂದ ಬರುತ್ತಿದ್ದ ಬೈಕ್‌, ಕಾರು ಹಾಗೂ ತರಕಾರಿ ಗಾಡಿಗೆ ಡಿಕ್ಕಿ ಹೊಡೆದಿದೆ.

ಬಳಿಕ ರಸ್ತೆ ಬದಿಯ ಅಂಗಡಿಯೊಂದಕ್ಕೆ ಗುದ್ದಿ ಮಗುಚಿ ಬಿದ್ದಿದೆ.ಇದರಿಂದ ಆಕ್ರೋಶಗೊಂಡ ಸ್ಥಳೀಯರು ಪಾನಮತ್ತ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆಯಲ್ಲಿ ಮೂರು ವಾಹನಗಳು ಜಖಂಗೊಂಡಿವೆ. ಗಾಯಾಳುಗಳು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿದ್ದಾರೆ.ಪೀಣ್ಯ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.