ಸರ್.ಎಂ.ವಿ. ಜನ್ಮದಿನಾಚರಣೆ ಸರ್ಕಾರದಿಂದಲೇ ಆಚರಣೆ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಸರ್.ಎಂ.ವಿ. ಜನ್ಮದಿನಾಚರಣೆ ಸರ್ಕಾರದಿಂದಲೇ ಆಚರಣೆ

Published:
Updated:

ಮೈಸೂರು: `ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆಯ ಅಂಗವಾಗಿ ಆಚರಿಸಲಾಗುವ ಎಂಜಿನಿಯರ್‌ಗಳ ದಿನವನ್ನು  ಮುಂದಿನ ವರ್ಷದಿಂದ ಸರ್ಕಾರವೇ ಆಚರಿಸಲಿದೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಘೋಷಿಸಿದರು.ಸರ್.ಎಂ. ವಿಶ್ವೇಶ್ವರಯ್ಯನವರ 151ನೇ ಜನ್ಮದಿನೋತ್ಸವ ಮತ್ತು ಎಂಜಿನಿಯರ್‌ಗಳ ದಿನಾಚರಣೆ ಅಂಗವಾಗಿ ಗುರುವಾರ ಕರ್ನಾಟಕ ಎಂಜಿನಿಯರುಗಳ ಸಂಘ, ಕರ್ನಾಟಕ ಎಂಜಿನಿಯರಂಗ್ ಸೇವಾ ಸಂಘ ಹಾಗೂ ಸರ್ಕಾರದ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಕಾರ್ಯಪಡೆ ಆಶ್ರಯದಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದರು.`ಸರ್.ಎಂ. ವಿಶ್ವೇಶ್ವರಯ್ಯನವರ ಮೌಲ್ಯಗಳು, ಮಹಾನ್ ಕಾರ್ಯಗಳು ಮತ್ತು ಆದರ್ಶಗಳನ್ನು ಪ್ರಚುರಪಡಿಸಲು ಅವರ ದಿನಾಚರಣೆಯನ್ನು ಸರ್ಕಾರವೇ ಆಚರಿಸಲಿದೆ. ಸಾಧ್ಯವಾದರೆ ಮುಂದಿನ ಎಂಜಿನಿಯರಿಂಗ್ ದಿನಾಚರಣೆಯಂದು ರಾಜ್ಯದ ಒಂದು ನಗರದಲ್ಲಿ ಸಚಿವ ಸಂಪುಟದ ಸಭೆಯನ್ನೂ ಹಮ್ಮಿಕೊಳ್ಳಲಾಗುವುದು~ ಎಂದು ಹೇಳಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry