ಭಾನುವಾರ, ಏಪ್ರಿಲ್ 18, 2021
27 °C

ಸರ್ಕಾರದಲ್ಲಿ ದಲಿತರಿಗೆ ಸೂಕ್ತ ಸ್ಥಾನ ಸಿಕ್ಕಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಬಿಜೆಪಿ ರಾಜ್ಯ ಸರ್ಕಾರದಲ್ಲಿ ದಲಿತರಿಗೆ ಸೂಕ್ತ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ~ ಎಂದು ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಡಾ.ಕೆ. ಅನ್ನದಾನಿ ಟೀಕಿಸಿದರು.ತುಮಕೂರಿನಲ್ಲಿ ಆ. 26ರಂದು ಪಕ್ಷದಿಂದ ನಡೆಯ ಲಿರುವ ಪರಿಶಿಷ್ಟ ಜಾತಿ ಸಮಾವೇಶದ ಅಂಗವಾಗಿ ನಗರದ ಪ್ರವಾಸಿ ಮಂದಿರದಲ್ಲಿ ಈಚೆಗೆ ನಡೆದ ಪೂರ್ವ ಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಜನತಾ ಪರಿವಾರದ ಸರ್ಕಾರಗಳು ರಾಜ್ಯದಲ್ಲಿ ಆಡಳಿತ ನಡೆಸಿದ ವೇಳೆ ದಲಿತರಿಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿತ್ತು. ಪ್ರಸ್ತುತ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶೋಷಿತರನ್ನು ಕಡೆಗಣಿಸಲಾಗಿದೆ. ಎಚ್.ಡಿ. ದೇವೇಗೌಡರು ಭೂರಹಿತ ದಲಿತರಿಗೆ ಜಮೀನು ನೀಡಿದ್ದಾರೆ. ಸಚಿವ ಸಂಪುಟದಲ್ಲೂ ಸೂಕ್ತ ಸ್ಥಾನಮಾನ ನೀಡಿದ್ದರು. ಆದರೆ, ಈಗಿನ ರಾಜ್ಯ ಸರ್ಕಾರದಲ್ಲಿ ಎಲ್ಲವೂ ತದ್ವಿರುದ್ಧ ಸ್ಥಿತಿಯಲ್ಲಿದೆ ಎಂದು ದೂರಿದರು.ಮಾಜಿ ಸಚಿವ ಕೋಟೆ ಶಿವಣ್ಣ ಮಾತನಾಡಿ, `ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ. ಬಿಜೆಪಿ ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ಮುಳು ಗಿದ್ದಾರೆ. ಸ್ವಜನಪಕ್ಷಪಾತದಿಂದ ಜನರು ಭ್ರಮನಿರಸನಗೊಂಡಿದ್ದಾರೆ.ಇದಕ್ಕೆ ರಾಜ್ಯ ಸರ್ಕಾರದ ಆಡಳಿತ ವೈಖರಿಯೇ ಕಾರಣ~ ಎಂದು ಆರೋಪಿಸಿದರು.

ಮಾಜಿ ಶಾಸಕ ಎಸ್. ಬಾಲರಾಜು ಮಾತನಾಡಿ, `ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶ ಯಶಸ್ಸು ಕಂಡಿದೆ. ಜತೆಗೆ, ಕಾಂಗ್ರೆಸ್‌ಗೆ ನಡುಕ ಹುಟ್ಟಿಸಿದೆ. ದಲಿತರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲು ಜೆಡಿಎಸ್ ವರಿಷ್ಠರು ಬದ್ಧರಾಗಿದ್ದಾರೆ.ಈ ಹಿನ್ನೆಲೆಯಲ್ಲಿ ತುಮಕೂರು ಸಮಾವೇಶನ್ನೂ ಯಶಸ್ವಿಗೊಳಿಸಬೇಕು~ ಎಂದು ಕೋರಿದರು. ಮೈಸೂರು ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಕೃಷ್ಣ ಮಾತನಾಡಿದರು. ಸಭೆಯಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಂಗಲ ಶಿವಕುಮಾರ್, ನಂಜನಗೂಡು ತಾಲ್ಲೂಕು ಘಟಕದ ಅಧ್ಯಕ್ಷ ಕಳವೆ ಕೇಶವಮೂರ್ತಿ, ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಉಪಾಧ್ಯಕ್ಷ ಚಿಕ್ಕಮಹದೇವ್, ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಸಿ.ಎಂ. ಕೃಷ್ಣಮೂರ್ತಿ, ನಗರಸಭೆ ಅಧ್ಯಕ್ಷೆ ಭಾಗ್ಯಮ್ಮ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.