ಭಾನುವಾರ, ಮೇ 22, 2022
24 °C

ಸರ್ಕಾರದ ಪರವಾಗಿಯೇ ತೀರ್ಪು :ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಅನರ್ಹಗೊಂಡಿರುವ ಪಕ್ಷೇತರ ಶಾಸಕರು ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದರೂ ತೀರ್ಪು ಸರ್ಕಾರದ ಪರವಾಗಿಯೇ ಬರಲಿದೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.ನಗರದಲ್ಲಿ ಸೋಮವಾರ  ಜಲಮಂಡಳಿ ವತಿಯಿಂದ ನಡೆದ ಸಾರ್ವಜನಿಕ ನಿರ್ಮಿತಿಗಳ ಗುಣಮಟ್ಟ ಪರಿಶೀಲನಾ ಕಾರ್ಯಪಡೆ ಮತ್ತು ತಜ್ಞರ ಸಮಿತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾತನಾಡಿದರು.‘ಸದನದಲ್ಲಿ ಸ್ಪೀಕರ್ ಪರಮೋಚ್ಛ ನಾಯಕ ಎಂಬುದನ್ನು ಹೈಕೋರ್ಟ್ ತೀರ್ಪು ಎತ್ತಿಹಿಡಿದಿದೆ. ಅನರ್ಹಗೊಂಡಿರುವ ಪಕ್ಷೇತರ ಶಾಸಕರು ಈ ಹಿಂದೆ ರಾಜ್ಯಪಾಲರಿಗೆ ಪತ್ರ ಬರೆದದ್ದು ಸರಿಯಾದ ಕ್ರಮವಲ್ಲ’ ಎಂದು ಅವರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.