ಶನಿವಾರ, ಮೇ 28, 2022
27 °C

ಸರ್ಕಾರದ ಮಲತಾಯಿ ಧೋರಣೆ: ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಜಿಎಫ್: ರಾಬರ್ಟಸನ್‌ಪೇಟೆಗೆ ಯರಗೋಳು ಯೋಜನೆ ಮತ್ತು ಗಣಿ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸುವ ಪ್ರಸ್ತಾವವನ್ನು ಈ ಬಾರಿಯೂ ಬಜೆಟ್‌ನಲ್ಲಿ ಕೈ ಬಿಡುವ ಮೂಲಕ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಆಲಂಗೂರು ಶ್ರೀನಿವಾಸ್ ಆರೋಪಿಸಿದರು.ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಉಚಿತವಾಗಿ ಅಕ್ಕಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಾಸಕರಿಲ್ಲದ ಕೆಜಿಎಫ್‌ನಲ್ಲಿ ಜನರ ಅಹವಾಲು ಸರ್ಕಾರಕ್ಕೆ ಮುಟ್ಟುತ್ತಿಲ್ಲ. ಸರ್ಕಾರವೂ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಭಿವೃದ್ಧಿಯಲ್ಲಿ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ  ಎಂದು ಅವರು ಕಿಡಿಕಾರಿದರು.ಕೆಜಿಎಫ್ ವಿಧಾನಸಭಾ ಕ್ಷೇತ್ರದ ಬಗ್ಗೆ ಸರ್ಕಾರ ತಳೆದಿರುವ ನೀತಿಯನ್ನು ಖಂಡಿಸಿ ಜೆಡಿಎಸ್ ವತಿಯಿಂದ ಅತಿ ಶೀಘ್ರದಲ್ಲಿಯೇ ಬೃಹತ್ ಹೋರಾಟ ನಡೆಸಲಾಗುವುದು ಎಂದು ಹೇಳಿದರು.ಮಾಜಿ ಶಾಸಕ ಎಂ.ಭಕ್ತವತ್ಸಲಂ ಮಾತನಾಡಿ, ಪ್ರಸ್ತುತ 500 ಬಡವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಮುಂದಿನ ತಿಂಗಳಿಂದ 1500 ಫಲಾನುಭವಿಗಳಿಗೆ ಅಕ್ಕಿ ವಿತರಣೆ ಮಾಡಲಾಗುವುದು ಎಂದರು. ನಗರಸಭೆ ಸದಸ್ಯರಾದ  ಕುಲಶೇಖರ್, ಕುಮಾರ್, ಬ್ಯಾಂಡ್ ಲೈನ್ ಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.