ಸರ್ಕಾರದ ವಿರುದ್ಧ ಪ್ರತಿಭಟನೆ

7

ಸರ್ಕಾರದ ವಿರುದ್ಧ ಪ್ರತಿಭಟನೆ

Published:
Updated:

ಮಂಡ್ಯ: ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮಂಗಳವಾರ ನಗರದಲ್ಲಿ ಕನ್ನಡ ಸೇನೆ ಕಾರ್ಯಕರ್ತರು ಮೆರವಣಿಗೆ ನಡೆಸಿದರು.ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಲೋಕಾ ಯುಕ್ತರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.ಸಂದ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ಹಲವು ಪಿಂಚಣಿ ನೀಡುವುದನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ಬಡ ಕುಟುಂಬಗಳು ಸಂಕಷ್ಟ ಎದುರಿಸಬೇಕಾಗಿದೆ. 15 ದಿನದಲ್ಲಿ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಸ್ವಜನ ಪಕ್ಷಪಾತ ಮಾಡಲಾಗುತ್ತಿದೆ.ಪಕ್ಷದೊಳಗಿನ ಭಿನ್ನಾಭಿಪ್ರಾಯದಿಂದಾಗಿ ಸರ್ಕಾರದ ಆಡಳಿತ ಯಂತ್ರ ನಿಂತು ಹೋಗಿದೆ. ಬರಗಾಲದಿಂದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯಪಾ ಲರು ಕೂಡಲೇ ಸರ್ಕಾರಕ್ಕೆ ಸೂಕ್ತ ಸೂಚನೆ ನೀಡಬೇಕು ಎಂದು ಆಗ್ರಹಿ ಸಿದರು. ಎಚ್.ಸಿ. ಮಂಜುನಾಥ, ಹನುಮೇಶ್, ಎಂ.ಕೆ. ಸಲೀಂ, ಅಸ್ಲಮ್ ಪಾಷಾ, ಜಯಮ್ಮ, ಗಾಯಿತ್ರಿ ಪಾಲ್ಗೊಂಡಿದ್ದರು.ಮಾಚಿದೇವರ ಜಯಂತ್ಯುತ್ಸವ ಇಂದು

ಜಿಲ್ಲಾ ಮಡಿವಾಳ ಮಾಜಿದೇವರ ಸಂಘದ ವತಿಯಿಂದ ಮೇ 23ರಂದು ಬೆಳಿಗ್ಗೆ 9.30ಕ್ಕೆ ಉದಯಗಿರಿ ಬಡಾವಣೆಯ ಜಿಲ್ಲಾ ಸಂಘದ ಕಾರ್ಯಾಲಯ ಆವರಣದಲ್ಲಿ ಮಡಿವಾಳ ಮಾಚಿದೇವರ ಜಯಂತ್ಸುವ, ಅಭಿನಂದನೆ ಹಮ್ಮಿಕೊಳ್ಳಲಾಗಿದೆ.ಗ್ರಾಹಕರ ಸಮಾವೇಶ ಇಂದು


ಅಶೋಕನಗರದಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ ಮೇ 23 ರಂದು ಸಂಜೆ 4 ಗಂಟೆಗೆ ಸಿಂಡಿಕೇಟ್ ಬ್ಯಾಂಕಿನ ಗ್ರಾಹಕರ ಸಮಾವೇಶ ಆಯೋಜಿಸ ಲಾಗಿದೆ ಎಂದು ಬ್ಯಾಂಕ್ ಮುಖ್ಯ ಪ್ರಬಂಧಕರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry