ಮಂಗಳವಾರ, ಮೇ 24, 2022
30 °C

ಸರ್ಕಾರದ ವಿರುದ್ಧ ರ‌್ಯಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪುರ:  ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕೃಷ್ಣರಾಜಪುರ ಮತ್ತು ಉದಯನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ತಾಲ್ಲೂಕು ಕಚೇರಿ ಎದುರು ಇತ್ತೀಚೆಗೆ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಿದರು.ರ‌್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎ.ಕೃಷ್ಣಪ್ಪ, `ರೈತರಿಗೆ ಉಚಿತ ವಿದ್ಯುತ್, ರಸಗೊಬ್ಬರ ಪೂರೈಸಲು ಸಾಧ್ಯವಾಗದ ಸರ್ಕಾರ, ಕಡು ಬಡವರಿಗೆ ಸಮರ್ಪಕ ಪಡಿತರ ಚೀಟಿ ವಿತರಿಸುವಲ್ಲಿಯೂ ವಿಫಲ        ವಾಗಿದೆ~ ಎಂದು ಆರೋಪಿಸಿದರು.ವಿಧಾನ ಪರಿಷತ್ತಿನ ಮಾಜಿ ವಿರೋಧ ಪಕ್ಷದ ನಾಯಕ ವಿ.ಎಸ್. ಉಗ್ರಪ್ಪ,    `ಸಾರ್ವಜನಿಕರ ಸಂಪತ್ತನ್ನು ಲೂಟಿ ಮಾಡಿರುವ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠಕಲಿಸಬೇಕು~ ಎಂದು ಕರೆ ನೀಡಿದರು.

ಮಾಜಿ ಶಾಸಕ ಎಂ.ಟಿ.ಬಿ. ನಾಗರಾಜ್, ಬಿಬಿಎಂಪಿ ಸದಸ್ಯೆ ಕೆ. ಪೂರ್ಣಿಮಾ, ಮುಖಂಡರಾದ ಎಂ.ನಾರಾಯಣ್, ಡಿ.ಎ.ಗೋಪಾಲ್ ಮಾತನಾಡಿದರು.ಕೃಷ್ಣರಾಜಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಕೆರೆ ಎಸ್.ನಾರಾಯಣಸ್ವಾಮಿ, ಉದಯನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಪ್ರಸಾದರೆಡ್ಡಿ, ಯುವ ಕಾಂಗ್ರೆಸ್ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಪಕ್ಷದ ಒಂಬತ್ತು ವಾರ್ಡ್ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.