ಜಗಳೂರು: ರಾಜ್ಯ ಬಿಜೆಪಿ ಸರ್ಕಾರ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾ ಜನರನ್ನು ವಂಚಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಆರೋಪಿಸಿದರು.
ಪಟ್ಟಣದಲ್ಲಿ ಗುರುವಾರ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರ ಸದಸ್ಯತ್ವ ನೋಂದಣಿ ಸಮಾವೇಶ ಹಾಗೂ ಯುವ ಜಾಗೃತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. 24 ತಾಸು ವಿದ್ಯುತ್ ನೀಡುವ ಬಗ್ಗೆ ಭರವಸೆ ನೀಡಿದ್ದ ಬಿಜೆಪಿ ಸರ್ಕಾರ 4 ತಾಸು ಸಹ ಗುಣಮಟ್ಟದ ವಿದ್ಯುತ್ ನೀಡುತ್ತಿಲ್ಲ. ಸುಳ್ಳು ಹಾಗೂ ಭ್ರಷ್ಟಾಚಾರದಲ್ಲಿ ನಿರತವಾಗಿರುವ ರಾಜ್ಯ ಸರ್ಕಾರಕ್ಕೆ ಆಯುಷ್ಯವಿಲ್ಲ ಎಂದು ಹರಿಹಾಯ್ದರು.ರಾಜ್ಯದಲ್ಲಿ ಬಿಜೆಪಿ ಕವಲು ದಾರಿಯಲ್ಲಿದೆ. ರಾಜ್ಯದಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ. ಬರುವ ಉಪ ಚುನಾವಣೆಯಲ್ಲಿ ನಾನು ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ. ಮುಂದಿನ ಅವಧಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯೋಚಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಮುಖಂಡರಾದ ಜಾನ್, ದೇವೇಂದ್ರಪ್ಪ, ಜಿ.ಪಂ. ಸದಸ್ಯರಾದ ಕೆ.ಪಿ. ಪಾಲಯ್ಯ, ಕೃಷ್ಣಮೂರ್ತಿ, ಎಸ್.ಕೆ. ರಾಮರೆಡ್ಡಿ, ಡಿ. ಆರ್. ಹನುಮಂತಪ್ಪ, ತಿಪ್ಪೇಸ್ವಾಮಿ ಗೌಡ, ಕಲ್ಲೇಶ್ರಾಜ್ ಪಟೇಲ್, ಶೇಖರಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.