ಶನಿವಾರ, ಏಪ್ರಿಲ್ 17, 2021
31 °C

ಸರ್ಕಾರಿ ಆಸ್ತಿ ವಶಕ್ಕೆ ಪಡೆಯಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುರುವೇಕೆರೆ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಐದು ವರ್ಷಗಳಿಂದ ಸುಮಾರು ರೂ.30 ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿ ನೆನೆಗುದಿಗೆ ಬಿದ್ದಿವೆ. ಪಂಚಾಯಿತಿ ಈ ಕೂಡಲೇ ಅಗತ್ಯ ಕ್ರಮ ಕೈಗೊಂಡು ಅವುಗಳನ್ನು ಸಾರ್ವಜನಿಕ ಅನುಕೂಲಕ್ಕೆ ಮುಕ್ತಗೊಳಿಸಬೇಕು ಎಂದು ಸದಸ್ಯರು ಈಚೆಗೆ ನಡೆದ ಪಟ್ಟಣ ಪಂಚಾಯಿತಿ ಸಭೆಯಲ್ಲಿ ಒತ್ತಾಯಿಸಿದರು.ಸದಸ್ಯ ದಿವಾಕರ್ ಮಾತನಾಡಿ ಪಟ್ಟಣ ಪಂಚಾಯಿತಿ ಸ್ವಾಧೀನದಲ್ಲಿರುವ ಆಸ್ತಿಗಳನ್ನು ಕೆಲವು ಖಾಸಗಿ ವ್ಯಕ್ತಿಗಳು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಪಂಚಾಯಿತಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ. ಈ ಬಗ್ಗೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಪಂಚಾಯಿತಿ ಆಸ್ತಿ ಮೇಲೆ ನಿಯಂತ್ರಣ ಹೊಂದಬೇಕು ಎಂದು ಆಗ್ರಹಿಸಿದರು.ನಂತರ ಮಾಧ್ಯಮದವರನ್ನು ಸ್ಥಳಕ್ಕೆ ಕರೆದೊಯ್ದು ಪಂಚಾಯಿತಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಬಳಸಿಕೊಳ್ಳುತ್ತಿರುವುದರ ನಿದರ್ಶನ ನೀಡಿದರು. ಪಂಚಾಯಿತಿ ಕಚೇರಿ ಹಿಂಭಾಗದಲ್ಲೆ ವ್ಯಕ್ತಿಯೊಬ್ಬರು ಪಂಚಾಯಿತಿಗೆ ಸೇರಿದ 58ಗಿ41 ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ಪೆಟ್ರೋಲ್ ಬಂಕ್ ಮಾಡಲು ಹೊರಟಿದ್ದಾರೆ. ಇದು ಪಂಚಾಯಿತಿಗೆ ಸೇರಿದ ಆಸ್ತಿ. ಇದು ವರ್ಗಾವಣೆಯಾದ ಬಗ್ಗೆ ಕಚೇರಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲ.ಇದೇ ರೀತಿ ಪಂಚಾಯಿತಿ ಕಚೇರಿ ಮುಂಭಾಗದ 33ಗಿ26 ವಿಸ್ತೀರ್ಣದಲ್ಲಿ ಅನಧಿಕೃತ ಕೋಳಿ ಅಂಗಡಿ ತೆರೆಯಲಾಗಿದೆ. ತಿಪಟೂರು ರಸ್ತೆಯಲ್ಲಿ ಕೃಷ್ಣಾ ಚಿತ್ರ ಮುಂದಿರದ ಪಕ್ಕ 1769 ಚದರಡಿ ವಿಸ್ತೀರ್ಣದಲ್ಲಿ (ಅಸೆಸ್‌ಮೆಂಟ್ ನಂ.1055 ಮತ್ತು 1056) ಅನಧಿಕೃತವಾಗಿ ಕೋಳಿ ಅಂಗಡಿ, ಹೋಟೆಲ್, ನಡೆಸಲಾಗುತ್ತಿದೆ ಎಂದು ಆರೋಪಿಸಿದರು.ಈ ಆಸ್ತಿಗಳ ಮೇಲೆ ಪಂಚಾಯಿತಿಗೆ ಯಾವುದೇ ನಿಯಂತ್ರಣವಿಲ್ಲ. ಪಂಚಾಯಿತಿ ಕೂಡಲೇ ಈ ಆಸ್ತಿಗಳನ್ನು ತನ್ನ ವಶಕ್ಕೆ ಪಡೆಯಬೇಕು ಎಂದು ದಿವಾಕರ್ ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.