ಬೆಂಗಳೂರು: `ರಾಜ್ಯದ ವಿವಿಧ ನಗರಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳನ್ನು ವೈದ್ಯಕೀಯ ಕಾಲೇಜುಗಳಾಗಿ ಮೇಲ್ದರ್ಜೆಗೆ ಏರಿಸಿದರೆ ಬಡವರಿಗೆ ಅನುಕೂಲವಾಗುತ್ತದೆ. ಈ ಕುರಿತು ರಾಜ್ಯ ಸರ್ಕಾರ ಗಮನ ಹರಿಸಬೇಕು~ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದರು.

ರೆಡ್ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ, ಉಡುಪಿಯ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಆಶ್ರಯದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

`ವೈದ್ಯಕೀಯ ಕಾಲೇಜುಗಳಲ್ಲಿ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ವೈದ್ಯರು, ನರ್ಸ್ಗಳು ಇರುವುದರಿಂದ 24 ಗಂಟೆಗಳ ಕಾಲವೂ ರೋಗಿಗಳ ಸೇವೆ ಮಾಡಲು ಸಾಧ್ಯಾಗುತ್ತದೆ. ಆಗ ಬಡವರು ಖಾಸಗಿ ಆಸ್ಪತ್ರೆಗಳಿಗೆ ಹೋಗುವುದನ್ನು ತಪ್ಪಿಸಿ ಸರ್ಕಾರಿ ಆಸ್ಪತ್ರೆಗಳಲ್ಲೇ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ನೀಡಲು ಸಾಧ್ಯವಾಗುತ್ತದೆ~ ಎಂದರು.

`ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಈ ಕಾರಣಕ್ಕಾಗಿ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಮುಂದಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಗಮನ ಹರಿಸಬೇಕು~ ಎಂದು ಅವರು ಸಲಹೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ, `ದಾನದ ರಕ್ತವನ್ನು ಖಾಸಗಿ ಆಸ್ಪತ್ರೆಗಳು ಮಾರಾಟ ಮಾಡುವ ಮೂಲಕ ದಾನಿಗಳನ್ನು ಅವಮಾನ ಮಾಡುತ್ತಿವೆ. ಇಂತಹ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು~ ಎಂದು ಎಚ್ಚರಿಸಿದರು.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ.ಶಂಕರ್ ಮಾತನಾಡಿ, `ಉಡುಪಿ ಜಿಲ್ಲಾ ಮೊಗವೀರ ಯುವಸಂಘಟನೆ ವತಿಯಿಂದ ಈ ವರ್ಷ 10 ಸಾವಿರ ಯುನಿಟ್ ರಕ್ತ ಸಂಗ್ರಹಿಸುವ ಗುರಿ ಇಡಲಾಗಿತ್ತು. ಈ ವರೆಗೆ 12 ಸಾವಿರ ಯುನಿಟ್ ರಕ್ತ ಸಂಗ್ರಹಿಸಲಾಗಿದೆ. ರಾಜ್ಯದಾದ್ಯಂತ ರಕ್ತದಾನ ಶಿಬಿರಗಳನ್ನು ಆಯೋಜಿಸಲು ಸಂಘಟನೆಗೆ ಆರೋಗ್ಯ ಇಲಾಖೆ ಅನುಮತಿ ನೀಡಬೇಕು~ ಎಂದು ವಿನಂತಿಸಿದರು.

ಶಾಸಕ ದಿನೇಶ್ ಗುಂಡೂರಾವ್, ಮಾಜಿ ಶಾಸಕ ಯು.ಆರ್.ಸಭಾಪತಿ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು.

ಕಡೆಗಣನೆ; ಟೀಕೆ

`ಗುಲ್ಬರ್ಗದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಿರ್ಲಕ್ಷ್ಯ ತೋರುವ ಮೂಲಕ ಕ್ಷೇತ್ರವನ್ನು ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ~ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

`ಬೇರೆ ಜಿಲ್ಲೆಗಳಲ್ಲಿ ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜಿಲ್ಲೆಯಲ್ಲೂ 100 ಹಾಸಿಗೆಗಳ ಆಸ್ಪತ್ರೆ ಇದೆ. ಕಾಲೇಜು ಸ್ಥಾಪಿಸಲು ಎಲ್ಲ ಸೌಲಭ್ಯಗಳು ಇವೆ~ ಎಂದು ಗಮನ ಸೆಳೆದರು.
ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿ, `ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆ ಆರಂಭಿಸುವಾಗ ಜಿಲ್ಲಾಸ್ಪತ್ರೆಯ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ. ಅದನ್ನು ವಾಪಸ್ ಕೊಟ್ಟ ಕೂಡಲೇ ಕಾಲೇಜು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.