ಸೋಮವಾರ, ಮೇ 17, 2021
31 °C

ಸರ್ಕಾರಿ ಐಟಿಐ ಸ್ಥಳಾಂತರಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯ (ಐಟಿಐ) ವಿಶ್ವೇಶ್ವರನಗರ ಶಾಖೆಯನ್ನು ಸ್ಥಳಾಂತರಿಸುವುದನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿ ಐಟಿಐ ವಿದ್ಯಾರ್ಥಿಗಳು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಸಂಸ್ಥೆಯ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.ಈ ಸಂಸ್ಥೆಗೆ ಬರುವುದಕ್ಕೆ ಎಲ್ಲ ರೀತಿಯ ಅನುಕೂಲಗಳಿವೆ. ಹಲವಾರು ವಿದ್ಯಾರ್ಥಿಗಳು ದೂರದ ಊರುಗಳಿಂದ ಬರುತ್ತಿದ್ದು, ಇಲ್ಲಿಗೆ ಬಸ್ ಸೌಲಭ್ಯ ಸೇರಿದಂತೆ ಇತರ ಸೌಲಭ್ಯಗಳಿವೆ. ಹೀಗಿರುವಾಗಿ ಈ ಶಾಖೆಯನ್ನು ಸ್ಥಳಾಂತರಿಸಿದರೆ ಹಲವರಿಗೆ ತುಂಬಾ ತೊಂದರೆಯಾಗಲಿದೆ. ಆದ್ದರಿಂದ ಈ ಶಾಖೆಯನ್ನು ಸ್ಥಳಾಂತರಿಸುವುದು ಬೇಡ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.