ಸರ್ಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಸಲಹೆ

7

ಸರ್ಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಸಲಹೆ

Published:
Updated:

ನೆಲಮಂಗಲ: `ಬಯಲಿನಲ್ಲಿ ಬಹಿರ್ದೆಸೆ ಹೋಗುವುದನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸರ್ಕಾರದ ಕಾರ್ಯಕ್ರಮಗಳನ್ನು ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಅನುಷ್ಠಾನಗೊಳಿಸಬೇಕು' ಎಂದು ಶಾಸಕ ಎಂ.ವಿ.ನಾಗರಾಜು ಸಲಹೆ ನೀಡಿದರು.ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ತಾಲ್ಲೂಕು ಪಂಚಾಯ್ತಿ ಮತ್ತು ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಯಂಟಗಾನಹಳ್ಳಿಯಲ್ಲಿ ಈಚೆಗೆ ಏರ್ಪಡಿಸಿದ್ದ ವಿಶ್ವ ಶೌಚಾಲಯ ಮತ್ತು ಮಕ್ಕಳ ಗ್ರಾಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮ ಪಂಚಾಯ್ತಿ ಅಧ್ಯಕ್ಷ ಟಿ.ಡಿ.ಧನಲಕ್ಷ್ಮೀ ಮಾತನಾಡಿ, `ಬಯಲು ಶೌಚದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸಾರ್ವಜನಿಕರ ನಿರ್ಲಕ್ಷ್ಯದಿಂದ ಸರ್ಕಾರದ ಯೋಜನೆಗಳು ಮೂಲೆಗುಂಪಾಗುತ್ತಿವೆ' ಎಂದರು.ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಲು ಸಾಕ್ಷ್ಯಚಿತ್ರ ಪ್ರದರ್ಶನ, ಬೀದಿನಾಟಕ, ಶಾಲಾ ಮಕ್ಕಳಿಂದ ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರೇಖಾ, ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿ.ಪಂ.ಸದಸ್ಯ ರಾಮು, ತಾ.ಪಂ.ಅಧ್ಯಕ್ಷ ಪುಟ್ಟಗಂಗಯ್ಯ, ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮೋಹನ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry