ಮಂಗಳವಾರ, ಮೇ 18, 2021
30 °C

ಸರ್ಕಾರಿ ಕಾಲೇಜಿಗೆ ಒಂದು ಕೋಟಿ: ಬಚ್ಚೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಠಡಿಗಳ ಕೊರತೆಯಿಂದ ಪಾಳಿಯಲ್ಲಿ ತರಗತಿಗಳನ್ನು ನಡೆಸುತ್ತಿರುವುದರಿಂದ ಹೊಸ ಕೊಠಡಿಗಳ ನಿರ್ಮಾಣಕ್ಕಾಗಿ ಒಂದು ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಅವರು ಹೇಳಿದರು.



ಕಾಲೇಜಿನಲ್ಲಿ ಆರಂಭವಾಗಿರುವ ಎನ್‌ಸಿಸಿ ಘಟಕ ಮತ್ತು ಈ ಸಾಲಿನ ಎನ್‌ಎಸ್‌ಎಸ್, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.



ಪ್ರಾಂಶುಪಾಲ ಸಿ.ಮರಿರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ   ಕುಮಾರ್, ಪುರಸಭೆ ಸದಸ್ಯ ಸಿ.ಜಯರಾಜ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.