ಸೋಮವಾರ, ಮೇ 10, 2021
28 °C

ಸರ್ಕಾರಿ ಕಾಲೇಜಿನ ಸಾಧನೆಗೆ ಸಚಿವ ಶ್ಲಾಘನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಖಾಸಗಿ ಶಾಲೆಗಳೇ ಪ್ರಭುತ್ವ ಸಾಧಿಸಿರುವ ಜಿಲ್ಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗುಣಮಟ್ಟದ ಶಿಕ್ಷಣದ ಮೂಲಕ ಗಮನ ಸೆಳೆಯುತ್ತಿದೆ. ವಿದ್ಯಾರ್ಥಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಡ್ಡು ಹೊಡೆದು ರ‌್ಯಾಂಕ್ ಗಳಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್ ಶ್ಲಾಘಿಸಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವ್ಯಾಯಾಮ ಶಾಲೆ ಕಟ್ಟಡ ಹಾಗೂ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ನೈತಿಕತೆ, ಚಾರಿತ್ರ್ಯದ ಬಗ್ಗೆಯೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಮಾತನಾಡಿ,  ಸರ್ಕಾರದ ಅನುದಾನದ ಜತೆಗೆ, ಜನಪ್ರತಿನಿಧಿಗಳು ಕಾಲೇಜಿಗೆ ಸಾಕಷ್ಟು ನೆರವು ನೀಡಿದ್ದಾರೆ. ಕಾಲೇಜಿನ ಅಭಿವೃದ್ಧಿಗೆ ಸರ್ಕಾರಕ್ಕೆ ರೂ 3 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಶೀಘ್ರದಲ್ಲೇ ರೂ 1.5 ಕೋಟಿ ನೆರವು ದೊರೆಯಲಿದೆ ಎಂದು ಮಾಹಿತಿ ನೀಡಿದರು.ನಿವೃತ್ತ ಪ್ರಾಂಶುಪಾಲ ಎಸ್.ಎಚ್. ಪಟೇಲ್ ಮಾತನಾಡಿದರು. ಪ್ರಾಂಶುಪಾಲ ಡಿ. ಬಸವರಾಜ್ ಪ್ರಾಸ್ತಾವಿಕ ಮಾತನಾಡಿದರು. ಮೇಯರ್ ಸುಧಾ ಜಯರುದ್ರೇಶ್, ಪಾಲಿಕೆ ಸದಸ್ಯೆ ಜ್ಯೋತಿ ಸಿದ್ದೇಶ್, ಕುಮಾರಿ, ಎಂ.ಎಸ್. ಕಿಣಿ, ಕೆ.ಎನ್. ಓಂಕಾರಪ್ಪ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.