ಶುಕ್ರವಾರ, ಮೇ 7, 2021
19 °C

ಸರ್ಕಾರಿ ಕೆಲಸಕ್ಕೆ ಸಹಕಾರ ಅಗತ್ಯ: ತಹಶೀಲ್ದಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಳಂದೂರು: ಸರ್ಕಾರಿ ಕೆಲಸಗಳಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕೆಂದು ತಹಶೀಲ್ದಾರ್ ಶಿವರಾಮು ಮನವಿ ಮಾಡಿದರು.

ತಾಲ್ಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಜನಸ್ಪಂದನ ಸಭೆಯಲ್ಲಿ ಅವರು ಮಾತನಾಡಿದರು.ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಾರೆ. ಆದರೆ, ಸೌಲಭ್ಯಗಳನ್ನು ಪಡೆದುಕೊಳ್ಳಲು ಅರ್ಹ ಫಲಾನುಭವಿಗಳಿಗೆ ಮಾತ್ರ ಅವಕಾಶವಿದೆ. ಇದನ್ನು ಮನಗಂಡು ಸಾಮಾಜಿಕ ಭದ್ರತಾ ಯೋಜನೆ ಸೇರಿದಂತೆ ಹಲವು ಸೌಲಭ್ಯಗಳಡಿಯಲ್ಲಿ ಅನೇಕ ಅನರ್ಹರು ಇದಕ್ಕೆ ಅರ್ಜಿ ಹಾಕಿ ವಿನಾಕಾರಣ ತೊಂದರೆ ನೀಡಬಾರದು ಎಂದರು.ಗ್ರೇಡ್-2 ತಹಶೀಲ್ದಾರ್ ಚಂದ್ರಪ್ಪ ಮಾತನಾಡಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಇಂತಹ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ಅಧಿಕಾರಿಗಳಿಂದ ಯಾವುದೇ ಕೆಲಸಗಳಲ್ಲಿ ವಿಳಂಬ ಆದಲ್ಲಿ ಇದನ್ನು ಮೇಲಾಧಿಕಾರಿಗಳಿಗೆ ತಿಳಿಸಬೇಕು. ಪಡಿತರ ಚೀಟಿ ಪಡೆದುಕೊಳ್ಳುವಲ್ಲಿ ಅನಗತ್ಯವಾಗಿ ಗೊಂದಲಗಳನ್ನು ಸೃಷ್ಟಿಸಿಕೊಳ್ಳದೆ ಒಂದೇ ಸೂರಿನಡಿ ವಾಸಿಸುವ ಎಲ್ಲರೂ ಪ್ರತ್ಯೇಕ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಾರದು ಎಂದು ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಸಾರ್ವಜನಿಕರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ. ಮರಿಸ್ವಾಮಿ, ಉಪಾಧ್ಯಕ್ಷೆ ಮಮತ, ಪ್ರಭಾರ ಇಒ ದೇವರಾಜು, ಬಿಇಒ ಪಿ. ಮಂಜುನಾಥ್, ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ್, ಆಹಾರ ನಿರೀಕ್ಷಕ ನಾಗರಾಜಯ್ಯ, ತೋಟಗಾರಿಕಾ ಇಲಾಖೆಯ ಚಂದ್ರು, ಚಂದ್ರಶೇಖರಮೂರ್ತಿ, ರಮೇಶ್, ಕಾರ್ಯದರ್ಶಿ ಶಶಿಕಲಾ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.