ಸರ್ಕಾರಿ ಜಾಹೀರಾತು: ಉಪ ಲೋಕಾಯುಕ್ತರಿಗೆ ದೂರು

ಬೆಂಗಳೂರು: ಸರ್ಕಾರಿ ಜಾಹೀರಾತು ಫಲಕಗಳಿಂದ ಮುಖ್ಯಮಂತ್ರಿ ಮತ್ತು ಸಚಿವರ ಭಾವಚಿತ್ರ ತೆಗೆಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸರ್ಕಾರಿ ಜಾಹೀರಾತುಗಳಲ್ಲಿ ಪ್ರಧಾನಿ, ರಾಷ್ಟ್ರಪತಿ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೊರತುಪಡಿಸಿ ಬೇರೆ ಯಾರ ಭಾವಚಿತ್ರವೂ ಇರಬಾರದು ಎಂದು ಆದೇಶಿಸಿದೆ.
ಆದರೆ ರಾಜ್ಯ ಸರ್ಕಾರ ವಿವಿಧೆಡೆ ಅಳವಡಿಸಿರುವ ಜಾಹೀರಾತು ಫಲಕಗಳಿಂದ ಮುಖ್ಯಮಂತ್ರಿ, ಸಚಿವರು ಮತ್ತು ಜನಪ್ರತಿನಿಧಿಗಳ ಭಾವಚಿತ್ರ ತೆಗೆಯಲು ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ಬೆಂಗಳೂರಿನ ಸಾಯಿದತ್ತ ಎಂಬುವರು ದೂರು ಸಲ್ಲಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.