ಮಂಗಳವಾರ, ಮೇ 18, 2021
22 °C

ಸರ್ಕಾರಿ ನೌಕರರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸರ್ಕಾರಿ ನೌಕರರ ಸಂಘದಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.ತಾಲ್ಲೂಕಿನ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಘವೇಂದ್ರ ಸೋಮವಾರ ಕಚೇರಿ ಜಮಾಬಂದಿ ನಡೆಸುತ್ತಿದ್ದ ವೇಳೆ ಮಂಜುನಾಥ್ ಎಂಬುವವರು ಸಭೆಗೆ ನುಗ್ಗಿ ದೌರ್ಜನ್ಯ ನಡೆಸಿದ್ದಾರೆ. ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ನೌಕರರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಸರ್ಕಾರಿ ನೌಕರರ ಸಂಘ ಖಂಡಿಸುವುದಾಗಿ ಅಧ್ಯಕ್ಷ ವಿ.ಕೆ. ವೀರಕ್ಯಾತರಾಯ ತಿಳಿಸಿದರು.ಪ್ರತಿಭಟನೆಯಲ್ಲಿ ನೌಕರರ ಸಂಘದ ಕಾರ್ಯದರ್ಶಿ ವಿಜಯನರಸಿಂಹ, ಬಾಲು, ಷಂಶೀರ್, ರಾಘವೇಂದ್ರ, ಅರಸಪ್ಪ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ನೌಕರರು, ಇಲಾಖೆ ನೌಕರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.