ಶನಿವಾರ, ಮೇ 28, 2022
24 °C

ಸರ್ಕಾರಿ ನೌಕರರ ರಕ್ಷಣೆಗೆಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  `ರಾಜ್ಯದಲ್ಲಿ ಸರ್ಕಾರಿ ನೌಕಕರ ರಕ್ಷಣೆಗೆ ಕರ್ನಾಟಕ ರಾಜ್ಯ ಗ್ರಾಮೀಣ ನೌಕರರ ರಕ್ಷಣಾ ಕಾಯಿದೆ ಜಾರಿಗೆ ತರಬೇಕು~ ಎಂದು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ರಮೇಶ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಸರ್ಕಾರಿ ನೌಕರರು ಮುಕ್ತವಾಗಿ ಯಾವುದೇ ಹಸ್ತಕ್ಷೇಪವಿಲ್ಲದೆ ಕರ್ತವ್ಯ ನಿರ್ವಹಿಸುವ ವಾತಾವರಣವಿಲ್ಲ. ಇತ್ತೀಚಿನ ದಿನಗಳಲ್ಲಿ ಕೆಲವು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ರಾಜ್ಯದ ನೌಕರರ ಮೇಲೆ ದೌರ್ಜನ್ಯವೆಸಗಿ ಹಲ್ಲೆ ನಡೆಸುತ್ತಿರುವುದು ಖಂಡನೀಯ~ ಎಂದರು.`ರಾಜಕಾರಣಿಗಳು, ಗೂಂಡಾಗಳು,  ಭೂ ಮಾಫಿಯಾದಂತಹ ಶಕ್ತಿಗಳನ್ನು ನಿಗ್ರಹಿಸುವಲ್ಲಿ ಪಿಡಿಓಗಳಿಗೆ  ಮೇಲಾಧಿಕಾರಿಗಳು, ಸಚಿವರುಗಳಿಂದಾಗಲಿ ರಕ್ಷಣೆ ಸಿಗುತ್ತಿಲ್ಲ ~ಎಂದರು.`ಮುಂದಿನ 30 ದಿನಗಳೊಳಗಾಗಿ ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮವನ್ನು ಜರುಗಿಸಿ, ಗ್ರಾಮೀಣ ನೌಕರರ ರಕ್ಷಣಾ ಕಾಯಿದೆಯನ್ನು ಜಾರಿಗೊಳಿಸಬೇಕು ಇಲ್ಲವಾದಲ್ಲಿ  ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು~ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.