ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳವಾರ, ಮೇ 21, 2019
23 °C

ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

Published:
Updated:

ಧಾರವಾಡ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿಗೆ ಸುಸಜ್ಜಿತ ಕಟ್ಟಡ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಆಗ್ರ ಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ (ಎಐಡಿ ಎಸ್‌ಒ) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಶನ್ (ಎಐಡಿವೈಒ) ನೇತೃತ್ವದಲ್ಲಿ ವಿದ್ಯಾರ್ಥಿ ಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.ಅವಶ್ಯಕ ಕೊಠಡಿಗಳು, ಶೌಚಾಲಯ, ಸುಸಜ್ಜಿತ ಗ್ರಂಥಾಲಯ, ಪ್ರಯೋಗಾ ಲಯದ ಸೌಲಭ್ಯ ಒದಗಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯವಿರುವ ಅನುದಾನ ಕೂಡಲೇ ಬಿಡುಗಡೆ ಮಾಡ ಬೇಕು. ಸ್ವಂತ ಕಟ್ಟಡ ನಿರ್ಮಾಣ ವಾಗುವವರೆಗೆ ಸುಸಜ್ಜಿತ ಕಟ್ಟಡವನ್ನು ಬಾಡಿಗೆ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸ ಲಾಗಿದೆ.ಕಾಲೇಜು ಆರಂಭವಾಗಿ ಐದು ವರ್ಷ ಗಳಾದರೂ ಸಹ ಇಲ್ಲಿಯವರೆಗೆ ಯಾವುದೇ ಸೌಕರ್ಯ ಒದಗಿಸಿಲ್ಲ. ಕೊಠಡಿಗಳಲ್ಲಿದೆ ಮೈದಾನದಲ್ಲಿ ಪಾಠ ಕೇಳುವ ಪರಿಸ್ಥಿತಿ ಇದೆ. ಈಗಿರುವ ಕಟ್ಟಡ ದಲ್ಲಿ ಸರಿಯಾದ ಶೈಕ್ಷಣಿಕ ವಾತಾವರಣ ಇಲ್ಲ. ಕೊಳಚೆ ಪ್ರದೇಶದಂತಿರುವ ಈಗಿನ ಆವರಣದಲ್ಲಿ ಕಾಲೇಜು ಮುಂದುವ ರಿಸಬಾರದು.1300 ವಿದ್ಯಾರ್ಥಿ ಗಳಿದ್ದರೂ ಸರಿಯಾದ ಸೌಕರ್ಯ ಒದ ಗಿಸಿಲ್ಲ ಎಂದು ಮನವಿಯಲ್ಲಿ ಆಪಾ ದಿಸಲಾಗಿದೆ.

ಕಲಾಭವನದಿಂದ ಪ್ರತಿಭಟನಾ ರ‌್ಯಾಲಿ ಮೂಲಕ ಜಿಲ್ಲಾಧಿಕಾರಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ತೆರಳಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಗಂಗಾಧರ ಬಡಿಗೇರ, ಲಕ್ಷ್ಮಣ ಜಡಗನ್ನ ವರ, ಶರಣ ಬಸವ, ನಾಗರಾಜ ತಳು ಗೇರಿ, ರಾಜಶೇಖರ, ಪ್ರವೀಣ, ಕವಿತಾ, ನಂದಿನಿ, ಮಲ್ಲಿಕಾರ್ಜುನ ಮತ್ತಿತರರು ಪ್ರತಿಭಟನೆ ನೇತೃತ್ವದ ವಹಿಸಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry