ಸರ್ಕಾರಿ ಪ್ರಾಥಮಿಕ ಶಾಲೆ ಉದ್ಘಾಟನೆ

7

ಸರ್ಕಾರಿ ಪ್ರಾಥಮಿಕ ಶಾಲೆ ಉದ್ಘಾಟನೆ

Published:
Updated:

ನೆಲಮಂಗಲ: ಎಲ್ಲ ವರ್ಗದ ಮಕ್ಕಳು ಶೈಕ್ಷಣಿಕ ಪ್ರಗತಿ ಹೊಂದಲು ಸುಸಜ್ಜಿತ ಶಾಲಾ ಕಟ್ಟಡ, ಮೂಲಸೌಕರ್ಯಗಳನ್ನು ಸರ್ಕಾರ ನೀಡುತ್ತಿದೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಹೇಳಿದರು.ಇಲ್ಲಿಗೆ ಸಮೀಪದ ಗೋಪಾಲಪುರ ಗ್ರಾಮ ಪಂಚಾಯತಿ ಬೊಮ್ಮಶೆಟ್ಟಹಳ್ಳಿಯಲ್ಲಿ ಗ್ರಾಮ ಪಂಚಾಯ್ತಿ ಮತ್ತು ಸರ್ವಶಿಕ್ಷಣ ಅಭಿಯಾನದ ಯೋಜನೆ ಅಡಿಯಲ್ಲಿ ರೂ. 8.25 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉದ್ಘಾಟಿಸಿ ಬಸವ ಯೋಜನೆಯಲ್ಲಿ 75 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿ.ರಾಮಸ್ವಾಮಿ ಮಾತನಾಡಿ, ನಿವೇಶನ ರಹಿತರಿಗೆ ಶೀಘ್ರವಾಗಿ ಆಶ್ರಯ ನಿವೇಶನದ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದರು.ತಾಲ್ಲೂಕು ಪಂಚಾಯ್ತಿ ಸದಸ್ಯೆ ವೀಣಾ ರಮೇಶ್, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಸೌಭಾಗ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಸ್.ಮುನಿರಾಜಯ್ಯ, ಶಿಕ್ಷಣಾಧಿಕಾರಿ ಸಿ.ಬಿ.ಜಯರಂಗ, ಬಿ.ಆರ್.ಸಿ.ಕೃಷ್ಣಪ್ಪ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಸಂದೀಪ್ ಉನ್ನಿಕೃಷ್ಣನ್ ಸರ್ಕಲ್‌ನ್ನು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಉದ್ಘಾಟಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry