ಗುರುವಾರ , ಮೇ 13, 2021
39 °C

ಸರ್ಕಾರಿ ಭೂಮಿ ಒತ್ತುವರಿ ಕೈಪಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆನೇಕಲ್ ತಾಲ್ಲೂಕಿನ ಅರಣ್ಯ ಪ್ರದೇಶದ ಒತ್ತುವರಿ ಸೇರಿದಂತೆ ಸರ್ಕಾರಿ ಭೂಮಿ ಒತ್ತುವರಿಯ ಸಮಗ್ರ ಮಾಹಿತಿ ಉಳ್ಳ ಕೈಪಿಡಿಯನ್ನು ಹೊರತರಲು ಬೆಂಗಳೂರು ನಗರ ಜಿಲ್ಲಾಡಳಿತ ನಿರ್ಧರಿಸಿದೆ.ಒತ್ತುವರಿಯ ಬಗ್ಗೆ ಈಗಾಗಲೇ ಸಮಗ್ರ ಸಮೀಕ್ಷೆ ನಡೆಯುತ್ತಿದೆ. ಆನೇಕಲ್ ತಾಲ್ಲೂಕಿನಲ್ಲಿ ಹಸಿರು ವಲಯದಲ್ಲಿ 965 ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಬಡಾವಣೆ ನಿರ್ಮಿಸಿದ್ದನ್ನು ಜಿಲ್ಲಾಡಳಿತ ಸೋಮವಾರ ಪತ್ತೆ ಹಚ್ಚಿತ್ತು. ಯಾವುದೇ ಒತ್ತಡಕ್ಕೆ ಮಣಿಯದೆ ಒತ್ತುವರಿ ಕಾರ್ಯಾಚರಣೆಯನ್ನು ಮುಂದುವರಿಸುವ ಸಲುವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಡಾ.ಜಿ.ಸಿ. ಪ್ರಕಾಶ್ ಅವರು ಕಳೆದ ಮೂರು ದಿನಗಳಿಂದ ಆನೇಕಲ್‌ಗೆ ಭೇಟಿ ನೀಡುತ್ತಿದ್ದಾರೆ.`ಕಾರ್ಯಾಚರಣೆ ಸಮರ್ಪಕವಾಗಿ ನಡೆಯಲು ತಾಲ್ಲೂಕು ಹಾಗೂ ಪಂಚಾಯ್ತಿ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಎಲ್ಲ ಸರ್ಕಾರಿ ಭೂಮಿಯನ್ನು ವಶಕ್ಕೆ ತೆಗೆದುಕೊಳ್ಳುವುದು ಜಿಲ್ಲಾಡಳಿತದ ಗುರಿ. ಸಮಗ್ರ ಸಮೀಕ್ಷೆಯನ್ನು ನಡೆಸಲಾಗುವುದು. ಸಮೀಕ್ಷೆ ಪೂರ್ಣಗೊಂಡ ಬಳಿಕ ಒತ್ತುವರಿಯಾದ ಭೂ ಪ್ರದೇಶದ ಮಾಹಿತಿ ಉಳ್ಳ ಕೈಪಿಡಿಯನ್ನು ಹೊರತರಲಾಗುವುದು. ಬಳಿಕ ಅದನ್ನು ಜಿಲ್ಲಾಡಳಿತದ ವೆಬ್‌ಸೈಟ್‌ನಲ್ಲಿ ಹಾಕಲಾಗುವುದು' ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.`ಅರಣ್ಯ ಪ್ರದೇಶದಲ್ಲಿ ಹಾಗೂ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ ಅಕ್ರಮ ನಿರ್ಮಾಣವನ್ನು ಏಕೆ ನೆಲಸಮ ಮಾಡಬಾರದು ಎಂದು ಪ್ರಶ್ನಿಸಿ 100 ಮಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ' ಎಂದು ಅವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.