ಗುರುವಾರ , ಏಪ್ರಿಲ್ 22, 2021
29 °C

ಸರ್ಕಾರಿ ಯೋಜನೆಗಳ ಸದುಪಯೋಗಕ್ಕೆ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಭೋವಿ (ವಡ್ಡರ) ಸಮಾಜದ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮತ್ತು ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡೆಯುವ ಮೂಲಕ ಮುಂದೆ ಬರಬೇಕು ಎಂದು ಉಸ್ತುವಾರಿ ಸಚಿವ ಸುನೀಲ್ ವಲ್ಯ್‌ಪುರೆ ಸೋಮವಾರ ಸಲಹೆ ಮಾಡಿದರು.ಇಲ್ಲಿನ ರಂಗಮಂದಿರದಲ್ಲಿ ಜಿಲ್ಲಾ ಭೋವಿ (ವಡ್ಡರ) ಸಮಾಜವು ತಮಗೆ ನೀಡಿದ ಸನ್ಮಾನಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ ಸೇರಿದಂತೆ ವಿವಿಧ ಯೋಜನೆಗಳು ಇವೆ. ಅರ್ಹ ಫಲಾನುಭವಿಗಳು ಅವುಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.ಸಮಾಜದಲ್ಲಿ ಅಭಿವೃದ್ಧಿ ಹೊಂದಲು ಶಿಕ್ಷಣ ಮುಖ್ಯವಾಗಲಿದೆ. ಅದಕ್ಕೆ ಪೂರಕವಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಲು ಒತ್ತು ನೀಡಬೇಕು ಎಂದು ಸಲಹೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಮುಖಂಡರು, ಸಮಾಜದ ಕಾರ್ಯಕ್ರಮಗಳಿಗಾಗಿ ಪ್ರತಿ ತಾಲ್ಲೂಕಿನಲ್ಲಿಯೂ ಸಮುದಾಯ ಭವನ ನಿರ್ಮಿಸಿಕೊಡಲು ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಅಲ್ಲದೆ, ರುದ್ರಭೂಮಿಗಾಗಿ ನಿವೇಶನ ಒದಗಿಸಬೇಕು,ಜನಾಂಗದ ಜನರು ವಾಸಿಸುವೆ ಕುಡಿಯುವ ನೀರು, ಶಾಲೆ ಸೌಲಭ್ಯವನ್ನುಒದಗಿಸಬೇಕು ಎಂದು ಕೋರಿ ಮನವಿಯನ್ನು ಅರ್ಪಿಸಿದರು.ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಮಾಣಿಕರಾವ್ ವಾಡೇಕರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಸುರೇಶ್ ಹುಬ್ಬಳಿಕರ್, ಧನರಾಜ್ ವಡೆಯರ್, ಶರಣಪ್ಪ ವಾಡೇಕರ ಮತ್ತಿತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.