ಗುರುವಾರ , ಏಪ್ರಿಲ್ 22, 2021
23 °C

ಸರ್ಕಾರಿ ಯೋಜನೆ ಸದ್ಬಳಕೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸೌಲಭ್ಯ ಪಡೆಯುವ ಫಲಾನುಭವಿಗಳು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಶಾಸಕ ಡಾ. ಎಂ.ಸಿ.ಸುಧಾಕರ್ ತಿಳಿಸಿದರು.ಜಲಾನಯನ ಅಭಿವೃದ್ಧಿ ಇಲಾಖೆಯಡಿ ಸಮಗ್ರ ಜಲಾನಯನ ನಿರ್ವಹಣೆಗಾಗಿ ಸ್ವಸಹಾಯ ಸಂಘಗಳಿಗೆ ಶುಕ್ರವಾರ ಸುತ್ತು ನಿಧಿಯ ಚೆಕ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಅರ್ಹರಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ದೊರೆಯಬೇಕು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿ ಒತ್ತಡ ಹೇರಬಾರದು ಮತ್ತು ರಾಜಕೀಯ ಮಾಡಬಾರದು ಎಂದರು.ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಸಮರ್ಪಕವಾಗಿ ನಡೆಯುತ್ತದೆ. ಪದೇ ಪದೇ ಸೌಲಭ್ಯಗಳನ್ನು ಪಡೆಯುವವರನ್ನು ನಿಯಂತ್ರಿಸಬೇಕು. ಹೊಸಬರಿಗೆ ಅವಕಾಶ ನೀಡಬೇಕು.

 

ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು ಎಂದು ಅವರು ತಿಳಿಸಿದರು.ಧನಲಕ್ಷ್ಮಿ ಮಹಿಳಾ ಸ್ವಸಹಾಯ ಸಂಘ, ಭುವನೇಶ್ವರಿ ಮಹಿಳಾ ಸ್ವಸಹಾಯ ಸಂಘ, ರಾಜೇಶ್ವರಿ ಮಹಿಳಾ ಸ್ವಸಹಾಯ ಸಂಘ ಮತ್ತು ಲಕ್ಷ್ಮಿ ಮಹಿಳಾ ಸ್ವಸಹಾಯ ಸಂಘಗಳಿಗೆ ತಲಾ 50 ಸಾವಿರ ರೂಪಾಯಿಯಂತೆ ಒಟ್ಟು 2 ಲಕ್ಷ ರೂಪಾಯಿ ವಿತರಿಸಲಾಯಿತು.ಜಿಲ್ಲಾ ಪಂಚಾಯಿತಿ ಸದಸ್ಯೆ ವೀಣಾ ಗಂಗುಪಲ್ಲ, ತಾಲ್ಲೂಕು ಪಂಚಾಯಿತಿ ಸದಸ್ಯ ಸ್ಕೂಲ್ ಸುಬ್ಬಾರೆಡ್ಡಿ, ಕೃಷಿ ಅಧಿಕಾರಿ ಜಿ.ವಿ.ಸುಬ್ಬಾರೆಡ್ಡಿ, ಅಧಿಕಾರಿಗಳಾದ ಕೆ.ಶ್ರಿನಿವಾಸರೆಡ್ಡಿ, ಸರಿತಾ, ರಾಮಯ್ಯ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.