ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಕಡ್ಡಾಯ: ಸುಪ್ರೀಂ ಕೋರ್ಟ್

7

ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಕಡ್ಡಾಯ: ಸುಪ್ರೀಂ ಕೋರ್ಟ್

Published:
Updated:

ನವದೆಹಲಿ (ಪಿಟಿಐ): ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಇರುವುದು ಕಡ್ಡಾಯ ಎಂದಿರುವ ಸುಪ್ರೀಂಕೋರ್ಟ್, ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನವೆಂಬರ್ ಅಂತ್ಯದೊಳಗೆ ಶೌಚಾಲಯ ನಿರ್ಮಿಸುವಂತೆ ನಿರ್ದೇಶನ ನೀಡಿದೆ.ನ್ಯಾಯಮೂರ್ತಿ ಡಿ.ಕೆ. ಜೈನ್ ನೇತೃತ್ವದ ನ್ಯಾಯಪೀಠ ಈ ನಿರ್ದೇಶನ ನೀಡಿದ್ದು, ಅದರಲ್ಲೂ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸೂಚಿಸಿದೆ. ಶೌಚಾಲಯ ನಿರ್ಮಾಣ ಕುರಿತು ನಿಗದಿತ ಗಡುವಿನೊಳಗೆ ವರದಿ ಸಲ್ಲಿಸುವಂತೆಯೂ ರಾಜ್ಯ ಸರ್ಕಾರಗಳಿಗೆ ತಿಳಿಸಿದೆ.ನವೆಂಬರ್ ಅಂತ್ಯದೊಳಗೆ ಶೌಚಾಲಯ ನಿರ್ಮಾಣ ಮಾಡಲು ಕಷ್ಟವಾದರೆ ತಾತ್ಕಾಲಿಕ ವ್ಯವಸ್ಥೆಯನ್ನಾದರೂ ಮಾಡಬೇಕು. ಆದರೆ, ಡಿಸೆಂಬರ್ ಅಂತ್ಯದೊಳಗೆ ಶೌಚಾಲಯ ಕಟ್ಟಡ ಕಾಯಂ ಆಗಿ ನಿರ್ಮಾಣ ಮಾಡಲೇ ಬೇಕು ಎಂದು ನ್ಯಾಯಪೀಠ ಸೂಚಿಸಿದೆ.ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಈ ತೀರ್ಪು ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry