ಮಂಗಳವಾರ, ಮೇ 11, 2021
25 °C

`ಸರ್ಕಾರಿ ಶಾಲೆಗೆ ದಾನಿಗಳ ನೆರವು ಅಗತ್ಯ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: `ಸರ್ಕಾರಿ ಶಾಲೆಗಳಲ್ಲಿ ಸೌಕರ್ಯ ಅಭಿವೃದ್ಧಿಗೆ ದಾನಿಗಳು ಸಂಘ- ಸಂಸ್ಥೆ ನೆರವು ನೀಡಬೇಕು' ಎಂದು ಶಾಸಕ ಎನ್.ನಾಗರಾಜು ಮನವಿ ಮಾಡಿದರು.ಬೆಂಗಳೂರಿನ ಡೆಲ್ ಸಂಸ್ಥೆ ವತಿಯಿಂದ ಪಟ್ಟಣದ ಬಾಲಕರ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.`ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಹಣ ವೆಚ್ಚ ಮಾಡುತ್ತಿದ್ದರೂ ಮೂಲಸೌಕರ್ಯ ಕೊರತೆ ಸಂಪೂರ್ಣ ನೀಗಿಲ್ಲ' ಎಂದು ಆತಂಕ ವ್ಯಕ್ತಪಡಿಸಿದರು. `ಮಕ್ಕಳಿಗೆ ಆಂಗ್ಲ ಭಾಷೆ ಕಲಿಕೆ ಅವಶ್ಯಕತೆಯಿದ್ದು ಸರ್ಕಾರಿ ಶಾಲೆಗಳಲ್ಲಿ ತರಬೇತಿ ಕೊಡಬೇಕಿದೆ' ಎಂದು ಅವರು ಅಭಿಪ್ರಾಯಪಟ್ಟರು. ವಕೀಲ ಎಚ್.ವಿ. ರಾಮಚಂದ್ರಪ್ಪ, ಮುಖ್ಯ ಶಿಕ್ಷಕ ಕೆ.ರಮೇಶ್, ಡೆಲ್ ಸಂಸ್ಥೆ ಅಧಿಕಾರಿಗಳಾದ ಶ್ಯಾಮಲಾ, ಪ್ರಶಾಂತ್ ಉಪಸ್ಥಿತರಿದ್ದರು. 620 ಮಕ್ಕಳಿಗೆ ಸೌಲಭ್ಯ ವಿತರಿಸಲಾಯಿತು.ಉದ್ಘಾಟನೆ: ತಾಲ್ಲೂಕಿನ ದೇವಶೆಟ್ಟಿಹಳ್ಳಿ ಗ್ರಾಮದ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೂತನ ಗೋಪುರ, ಗಣಪತಿ, ನವಗ್ರಹಗಳ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಸಮಾರಂಭ ಶನಿವಾರ ನಡೆಯಿತು. ಶಾಸಕ ಎನ್.ನಾಗರಾಜು, ದಾನಿ ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.