ಸರ್ಕಾರಿ ಶಾಲೆ ಅಭಿವೃದ್ಧಿಗೆ ಶ್ರಮಿಸಿ

ಮಂಗಳವಾರ, ಜೂಲೈ 23, 2019
20 °C

ಸರ್ಕಾರಿ ಶಾಲೆ ಅಭಿವೃದ್ಧಿಗೆ ಶ್ರಮಿಸಿ

Published:
Updated:

ಮಾಲೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸಿದ್ದಲ್ಲಿ ಎಲ್ಲ ಮಕ್ಕಳಿಗೂ ಗುಣಾತ್ಮಕ ಶಿಕ್ಷಣದ ಜೊತೆಗೆ ಮಕ್ಕಳ ಶಿಕ್ಷಣ ಹಕ್ಕಿನ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎ.ರಾಮಸ್ವಾಮಿ ರೆಡ್ಡಿ ತಿಳಿಸಿದರು.ತಾಲ್ಲೂಕಿನ ತೊರ‌್ನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ದಾನಿಗಳು ಹಮ್ಮಿಕೊಂಡಿದ್ದ ಉಚಿತ ಟೈ, ಬೆಲ್ಟ್ ಮತ್ತು ನೋಟ್‌ಪುಸ್ತಕ ವಿತರಿಸಿ ಮಾತನಾಡಿದ ಅವರು, ಸಮುದಾಯ ಕೈಜೋಡಿಸಿದಾಗ ಮಾತ್ರ ಮಕ್ಕಳ ಅಭಿವೃದ್ಧಿ ಸಾಧ್ಯ ಎಂದರು.ಇದೇ ಸಂದರ್ಭ ಮಹಿಳಾ ಪೋಷಕರಿಗೆ ಶಾಲಾ ಶಿಕ್ಷಕಿಯರು ಅರಿಷಿಣನ-ಕುಂಕುಮ, ಬಳೆ ನೀಡಿ ಗೌರವಿಸಿದರು. ತೊರ‌್ನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ, ಬಿಇಒ ವೆಂಕಟರಾಮರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ರೋಜಾ ರಾಜಪ್ಪ, ವಿ.ನಾಗರಾಜು, ಸೋಮಣ್ಣ, ಎಸ್‌ಡಿಎಂಸಿ ಅಧ್ಯಕ್ಷ ರಾಮಾಂಜನಯ್ಯ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮುನಿನಾರಾಯಣ, ಕಾರ್ಯದರ್ಶಿ ಆರ್.ನರಸಿಂಹ, ಮುಖ್ಯ ಶಿಕ್ಷಕಿ ವೆಂಕಟಲಕ್ಷ್ಮಮ್ಮ, ಮುಖಂಡರಾದ ಕರಗದ ಪೂಜಾರಿ ಬಾಬು, ಸೈಯ್ಯದ್ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry