ಅರಸೀಕೆರೆ: ಅನಕ್ಷರಸ್ಥರು ಸಾಕ್ಷರರಾಗುವುದರ ಜತೆಗೆ ಸ್ವಾವಲಂಬಿಗಳಾಗಿ ತಮ್ಮ ಬದುಕಿನಲ್ಲಿ ವೃತ್ತಿ ತರಬೇತಿ ಪಡೆದು ಜೀವನದಲ್ಲಿ ಆರ್ಥಿಕ ಉನ್ನತಿ ಹೊಂದಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಚಂದ್ರಶೇಖರ್ ಬುಧವಾರ ತಿಳಿಸಿದರು. ಪಟ್ಟಣದ ಸರ್ಕಾರಿ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಲೋಕ ಶಿಕ್ಷಣಾ ನಿರ್ದೇಶನಾಲಯ, ಜಿಲ್ಲಾ ಮತ್ತು ತಾಲ್ಲೂಕು ಸಾಕ್ಷರತಾ ಸಮಿತಿ ಹಾಗೂ ನವ ಸಾಕ್ಷರರ ಅಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವೃತ್ತಿ ಕೌಶಲ್ಯ ತರಬೇತಿ ಮುಕ್ತಾಯ ಹಾಗೂ ಅರ್ಹತಾ ಪತ್ರ ವಿತರಣಾ ಸಮಾರೋಪದಲ್ಲಿ ಮಾತನಾಡಿದರು.

ಮಹಿಳೆಯರು ಅಕ್ಷರಸ್ಥರಾ ಗುವುದರೊಂದಿಗೆ ಕುಟುಂಬದಲ್ಲಿ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ರಾಜ್ಯ ಸರ್ಕಾರ ಹಲವು ಜನಪರ ಯೋಜನೆಗಳನ್ನು ಅನುಷ್ಟಾನ ಗೊಳಿಸುತ್ತಿದೆ. ಮಹಿಳೆಯರು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಮುಂದೆ ಬರಬೇಕು ಎಂದು ಹೇಳಿದರು. ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಮಹಿಳೆಯರು ತಾವೇ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು ತಾಲ್ಲೂಕು ಪಂಚಾಯಿತಿ ವತಿಯಿಂದ ಕಚೇರಿ ಬದಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಾಲ್ಕು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ.

ತಾಲ್ಲೂಕಿನಲ್ಲಿರುವ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಮಹಿಳೆಯರು ತಾವೇ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು ಈ ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ಪಡೆದು ವಸ್ತುಗಳನ್ನು ಮಾರಾಟ ಮಾಡಲು ಉಪಯೋಗಿ ಸಿಕೊಳ್ಳ ಬಹುದು ಎಂದು ಸಲಹೆ ನೀಡಿದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎಚ್.ಟಿ. ಶಿವಮೂರ್ತಿ ಮಾತನಾಡಿ, ಗ್ರಾಮೀಣ ಭಾಗದ ರೈತರು ಕೃಷಿ ಚಟುವಟಿಕೆ ಜತೆಗೆ ಉಪ ಕಸುಬುಗಳನ್ನು ಅಳವಡಿಸಿಕೊಂಡು ಪಟ್ಟಣದಲ್ಲಿ ತಯಾರಿಸುವ ವಸ್ತುಗಳ ಗುಣಮಟ್ಟಕ್ಕೆ ತಕ್ಕಂತೆ ತಯಾರಿಸಿದಲ್ಲಿ ಮಾತ್ರ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಧ್ಯ.

ತಾಲ್ಲೂಕಿನಲ್ಲಿ ಪ್ರಮುಖ ವಾಣಿಜ್ಯ ಬೆಳೆ ತೆಂಗು ಬೆಳೆಯಾಗಿರುವುದರಿಂದ ತೆಂಗಿನಲ್ಲಿ ಸಿಗುವ ತೆಂಗಿನ ನಾರು ಮತ್ತು ಕಡ್ಡಿ ಪೊರಕೆಗಳಂತಹ ಕಚ್ಚಾ ವಸ್ತುಗಳನ್ನು ಬಳಕೆ ಮಾಡಿಕೊಂಡು ಅಲ್ಪ ವೆಚ್ಚದಲ್ಲಿ ಲಾಭ ಪಡೆಯಬಹುದು ಎಂದರು. ಕಳೆದ 30 ದಿನಗಳಿಂದ ಇಲಾಖೆ ವತಿಯಿಂದ ತರಬೇತಿ ನೀಡಲಾಗಿದ್ದ ತಾಲ್ಲೂಕಿನ ಕಡಲಮಗೆ, ರಾಂಪುರ, ಜೆಸಿಪುರ, ಹರಪನಹಳ್ಳಿ, ಕುರಾದಹಳ್ಳಿ, ಮುದುಡಿ ಬಿ ತಾಂಡ್ಯ ಮುದ್ದನಹಳ್ಳಿ ಗ್ರಾಮಗಳ ನವಸಾಕ್ಷರರಿಗೆ ಮೇಣದ ಬತ್ತಿ, ಎಂಬ್ರಾಯಿಡರಿ, ಸಿದ್ದ ಉಡುಪು ತಯಾರಿಕೆ ಬಗ್ಗೆ ತರಬೇತಿ ನೀಡಲಾಗಿತ್ತು.

ಅವರಿಗೆ ಅರ್ಹತಾ ಪ್ರಶಸ್ತಿ ಪತ್ರ ವಿತರಿಸಲಾಯಿತು. ಹಾಸನ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹೊಸಮಠ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ರುದ್ರಯ್ಯ ಹಾಗೂ ತಾಲ್ಲೂಕು ನವಸಾಕ್ಷರರ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.