ಭಾನುವಾರ, ಮೇ 9, 2021
26 °C

ಸರ್ಕಾರಿ ಸ್ವಾಮ್ಯದ ಪತ್ರಿಕೆ ಹಾಗೂ ಚಾನೆಲ್: ಮಮತಾ ಬ್ಯಾನರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲ್ಕತ್ತ (ಪಿಟಿಐ): ಸರ್ಕಾರಿ ಕೆಲಸಗಳ ಮೇಲೆ ಪತ್ರಿಕೆಗಳು ಸರಿಯಾಗಿ ಬೆಳಕು ಚೆಲ್ಲುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಪತ್ರಿಕೆ ಹಾಗೂ ಚಾನೆಲ್ ಅಗತ್ಯವಿದೆ. ಈ ಮೂಲಕ ಸರ್ಕಾರದ ಸಾಧನೆಗಳನ್ನು ಜನರ ಗಮನಕ್ಕೆ ತರಲು ಅನುಕೂಲವಾಗಲಿದೆ~ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

~ಮಾಧ್ಯಮಗಳು ನಕಾರಾತ್ಮಕ ಸುದ್ದಿಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಸರ್ಕಾರ ಮಾಡುತ್ತಿರುವ ಉತ್ತಮ ಕಾರ್ಯಗಳತ್ತ ಗಮನ ಹರಿಸುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವತಿಯಿಂದ ಆಯಾಯ ವರ್ಷದಲ್ಲಿ ಕೈಗೊಂಡ ಕೆಲಸ ಹಾಗೂ ಯೋಜನೆಗಳ ಕುರಿತ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡುವುದಾಗಿ~ ಅವರು ಈ ಸಂದರ್ಭದಲ್ಲಿ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.