ಶುಕ್ರವಾರ, ಜೂನ್ 18, 2021
24 °C

ಸರ್ಕಾರ ಅಗತ್ಯ ವಸ್ತು ಮಾರಾಟ ವಹಿಸಿಕೊಳ್ಳಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ತೀವ್ರ ಬೆಲೆ ಏರಿಕೆಯನ್ನು ತಡೆಗಟ್ಟಿ, ಆಹಾರ ಧಾನ್ಯಗಳ ಹಾಗೂ ಅಗತ್ಯ ವಸ್ತುಗಳ ಸಗಟು ಮತ್ತು ಚಿಲ್ಲರೆ ಮಾರಾಟಗಳನ್ನು ಸರ್ಕಾರ ವಹಿಸಿಕೊಳ್ಳಬೇಕು~ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕರ್ನಾಟಕ ರಾಜ್ಯ ಸಮಿತಿಕಾರ್ಯದರ್ಶಿ ಕೆ.ರಾಧಾಕೃಷ್ಣ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.`ನಾಡಿನ ಜನತೆಯು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಸರ್ಕಾರಕ್ಕೆ ಮನದಟ್ಟು ಮಾಡುವ ಪ್ರಯತ್ನವಾಗಿ ಇದೇ 14ರಂದು ನವದೆಹಲಿಯಲ್ಲಿ ಅಖಿಲ ಭಾರತ ಮಟ್ಟದ `ಪಾರ್ಲಿಮೆಂಟ್ ಚಲೋ ಚಳವಳಿ~ ಯನ್ನು ನಡೆಸಲಾಗುವುದು~ ಎಂದರು.`ಶಿಕ್ಷಣ, ಆರೋಗ್ಯ, ಆಹಾರ ಇವೆಲ್ಲ ಸೇವೆಗಳು. ಇವನ್ನೆಲ್ಲ ವ್ಯಾಪರೀಕರಣಗೊಳಿಸಿ, ಮಾರಾಟದ ವಸ್ತುಗಳನ್ನಾಗಿ ಮಾಡಲಾಗಿದೆ. ಹಣವಿದ್ದವರಿಗೆ ಮಾತ್ರ ಶಿಕ್ಷಣ ಎನ್ನುವಂತಾಗಿದೆ. ಬಡ ಜನತೆಯ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ~ ಎಂದು ಹೇಳಿದರು.`ಹೀಗೆ ಇಡೀ ದೇಶವೇ ಅನೇಕ ಸಮಸ್ಯೆಗಳಿಂದ ಬಳಲುತ್ತಿದೆ. ಇದಕ್ಕೆಲ್ಲಾ ಸರ್ಕಾರವೇ ನೇರ ಹೊಣೆಯಾಗುತ್ತದೆ. ಇದನ್ನೆಲ್ಲ ವಿರೋಧಿಸಿ, ನವದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ~ ಎಂದರು.  ಸದಸ್ಯರಾದ ಬಿ.ಆರ್.ಮಂಜುನಾಥ್, ಎಚ್.ಜಿ.ಜಯಲಕ್ಷ್ಮಿ ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.