ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ಸರ್ಕಾರ ಹಾಗೂ ಕಾಮೆಡ್ – ಕೆ ನಡುವೆ ಸೋಮವಾರ ಒಪ್ಪಂದ ಏರ್ಪಟ್ಟಿದೆ.

ಹಾಲಿ ಇರುವ ಸೀಟು ಹಂಚಿಕೆ, ಶುಲ್ಕ ಪದ್ಧತಿ 2014–15ನೇ ಸಾಲಿಗೂ ಮುಂದುವರಿಯಲಿದೆ. ಇದರಿಂದ ಸ್ನಾತಕೋತ್ತರ ವಿಭಾಗದಲ್ಲಿ ಶೆ 33ರಷ್ಟು ಸೀಟುಗಳು ಸರ್ಕಾರಿ ಕೋಟಾದಡಿ ಲಭ್ಯವಾಗಲಿವೆ. ಉಳಿದವು ಕಾಮೆಡ್– ಕೆ ಕೋಟಾಕ್ಕೆ ಸೇರಲಿವೆ.

ಅಲ್ಪಸಂಖ್ಯಾತ ಕಾಲೇಜು: ‘ಭಾಷಾ ಅಲ್ಪಸಂಖ್ಯಾತ’ ಸ್ಥಾನಮಾನವನ್ನು ಅಮಾನತಿನಲ್ಲಿ ಇಟ್ಟು ಹೊರಡಿಸಿದ ಆದೇಶ ರದ್ದುಪಡಿಸುವಂತೆ ಏಳು ಖಾಸಗಿ ವೈದ್ಯ ಕಾಲೇಜುಗಳು ಮನವಿ ಮಾಡಿದ್ದವು. ಇದನ್ನು ಸರ್ಕಾರ ಮತ್ತೆ ತಿರಸ್ಕರಿಸಿದೆ.

ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಶೇ 33ರಷ್ಟು ಹಾಗೂ ಪದವಿಯಲ್ಲಿ ಶೇ 40ರಷ್ಟು ಸೀಟುಗಳನ್ನು ಸರ್ಕಾರಿ ಕೋಟಾಗೆ ಬಿಟ್ಟುಕೊಡುವಂತೆ ಈ ಕಾಲೇಜುಗಳಿಗೆ ಸರ್ಕಾರ ಸೂಚಿಸಿದೆ.

ಎರಡು ದಿನಗಳಲ್ಲಿ ನಿಲುವು ತಿಳಿಸುವುದಾಗಿ ಕಾಲೇಜುಗಳ ಆಡಳಿತ ಮಂಡಳಿಗಳು ಭರವಸೆ ನೀಡಿವೆ ಎಂದು ಮೂಲಗಳಿಂದ ಗೊತ್ತಾಗಿದೆ.

ಅಲ್ಪಸಂಖ್ಯಾತರ ಸ್ಥಾನಮಾನ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಸೋಮವಾರ ಅಲ್ಪಸಂಖ್ಯಾತ ಕಾಲೇಜುಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ಆದರೆ, ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.

ಮಂಗಳೂರಿನ ಎ.ಜೆ.ಇನ್ಸ್ಟಿ ಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ಶ್ರೀನಿವಾಸ ವೈದ್ಯಕೀಯ ಕಾಲೇಜು, ರಾಯಚೂರಿನ ನವೋದಯ ವೈದ್ಯಕೀಯ ಕಾಲೇಜು, ಬೆಂಗಳೂರಿನ ಎಂವಿಜೆ, ರಾಜರಾಜೇಶ್ವರಿ, ವೈದೇಹಿ, ಸಪ್ತಗಿರಿ ವೈದ್ಯಕೀಯ ಕಾಲೇಜುಗಳು ನಿಯಮದ ಪ್ರಕಾರ ಅಲ್ಪಸಂಖ್ಯಾತರಿಗೆ ಒಟ್ಟೂ ಶೇ 66ರಷ್ಟು ಸೀಟುಗಳನ್ನು ನೀಡಬೇಕು. ಆದರೆ ಇದನ್ನು ಪಾಲಿಸದೇ ಇರುವುದರಿಂದ ಗೊಂದಲ ಉಂಟಾಗಿದೆ.

ಎಂಜಿನಿಯರಿಂಗ್: ಎಂಜಿನಿಯರಿಂಗ್ ಕೋರ್ಸ್ಗಳ ಶುಲ್ಕ ಹೆಚ್ಚಳಕ್ಕೆ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟ ಪಟ್ಟು ಹಿಡಿದಿದೆ.

ಆದರೆ, ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈ ವಿವಾದ ಈಗ ಹೈಕೋರ್ಟ್ ಮೆಟ್ಟಿಲು ಹತ್ತಿದ್ದು, ಮಂಗಳವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈ ಪ್ರಕರಣ ಕೋರ್ಟ್ನಲ್ಲಿ ಇತ್ಯರ್ಥವಾದ ನಂತರವೇ ಒಪ್ಪಂದ ಏರ್ಪಡುವ ಸಾಧ್ಯತೆ ಇದೆ.

ನನೆಗುದಿಯಲ್ಲಿ
ಪದವಿ ಹಂತದ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ಕರಡು ಸಿದ್ಧವಾಗಿದೆ. ಆದರೆ, ಸಣ್ಣಪುಟ್ಟ ಬದಲಾವಣೆಗಳಿಗೆ ಕಾಮೆಡ್ – ಕೆ ಬೇಡಿಕೆ ಇಟ್ಟಿದೆ. ಹೀಗಾಗಿ ಈ ವಿಷಯ ಇನ್ನೂ ನನೆಗುದಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.