`ಸರ್ಕಾರ ವಜಾಕ್ಕೆ ಒತ್ತಾಯಿಸಲು ಶೀಘ್ರ ರಾಜ್ಯಪಾಲರ ಭೇಟಿ'

7

`ಸರ್ಕಾರ ವಜಾಕ್ಕೆ ಒತ್ತಾಯಿಸಲು ಶೀಘ್ರ ರಾಜ್ಯಪಾಲರ ಭೇಟಿ'

Published:
Updated:

ಮೈಸೂರು:  `ಬಹುಮತ ಕಳೆದುಕೊಂಡಿರುವ ಬಿಜೆಪಿ ಸರ್ಕಾರ ವಜಾಗೊಳಿಸಲು ರಾಜ್ಯಪಾಲರನ್ನು ಶೀಘ್ರದಲ್ಲೇ ಭೇಟಿಯಾಗಿ ಒತ್ತಾಯಿಸುತ್ತೇನೆ' ಎಂದು ಕರ್ನಾಟಕ ಜನತಾ ಪಕ್ಷ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಂಗಳವಾರ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು `ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಬೇಕು ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಸಲಹೆ ನೀಡುತ್ತೇನೆ' ಎಂದು ಹೇಳಿದರು.`ನನ್ನ ಬೆಂಬಲಿಗರಾದ ಬಿ.ಜೆ.ಪುಟ್ಟಸ್ವಾಮಿ ಮತ್ತು ತುಮಕೂರಿನ ಸಂಸದ ಬಸವರಾಜು ಅವರ ವಿರುದ್ಧ ಪಕ್ಷ ಕ್ರಮ ತೆಗೆದುಕೊಂಡಿದೆ. ಇದನ್ನು ನೋಡಿ ನಾನು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ರಾಜ್ಯದ ಜನ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ' ಎಂದು ಹೇಳಿದರು.ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿರುವ ಕುರಿತ ಪ್ರಶ್ನೆಗೆ `ದೊಡ್ಡವರ ಬಗ್ಗೆ ನಾನೇನು ಮಾತನಾಡುವುದಿಲ್ಲ' ಎಂದಷ್ಟೇ ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry