ಸೋಮವಾರ, ಜೂನ್ 21, 2021
28 °C

ಸರ್ಕಾರ ಸಾಧನೆ ತಿಳಿಸಲು ಸಚಿವ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ‘ಕಾಂಗ್ರೆಸ್‌ ಸರ್ಕಾರದ ಸಾಧನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡಲು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಮುಂದಾಗಬೇಕು’ ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಸಂಸದ ಆರ್. ಧ್ರುವನಾರಾಯಣ ಕ್ಷೇತ್ರದ ಅಭಿವೃದ್ಧಿಗೆ ಅವಿರತವಾಗಿ ದುಡಿಯುತ್ತಿದ್ದಾರೆ. ಮತ್ತೆ ಅವರ ಗೆಲುವಿಗೆ ಶ್ರಮಿಸಬೇಕು ಎಂದರು.ನಂಜನಗೂಡು, ಗುಂಡ್ಲುಪೇಟೆ ಹಾಗೂ ತಿ. ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಿ ಬಂದಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳು ಕಾಂಗ್ರೆಸ್ ಗೆಲುವಿಗೆ ಪೂರಕವಾಗಿವೆ ಎಂದು ಹೇಳಿದರು.ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ನಾಯಕ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಕಲ್ಪಿಸಿತು. ಹೀಗಾಗಿ, ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ ಎಂದರು.  ತಳವಾರ ಹಾಗೂ ಪರಿವಾರ ಜನಾಂಗದ ನಡುವಿನ ಗೊಂದಲ ಬಗೆಹರಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ಕ್ರಮವಹಿಸಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ, ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಪಿ. ಸದಾಶಿವಮೂರ್ತಿ,  ರಾಮಪ್ಪ, ಎಚ್.ಸಿ. ಬಸವರಾಜು, ಬಿ.ಕೆ. ರವಿಕುಮಾರ್, ಸೈಯದ್ ರಫಿ, ಹೊಂಗನೂರು ಚಂದ್ರು, ಕೊಪ್ಪಾಳಿ ಮಹದೇವನಾಯಕ, ರಾಮಚಂದ್ರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.