ಸರ್ಜಾಪುರ: 22ರವರೆಗೆ ನಿಷೇಧಾಜ್ಞೆ

7

ಸರ್ಜಾಪುರ: 22ರವರೆಗೆ ನಿಷೇಧಾಜ್ಞೆ

Published:
Updated:

ಆನೇಕಲ್: ತಾಲ್ಲೂಕಿನ ಸರ್ಜಾಪುರದಲ್ಲಿ ಸೋಮವಾರ ಮಧ್ಯಾಹ್ನದಿಂದ ಬುಧವಾರ ಬೆಳಗ್ಗೆ 6ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಸೋಮವಾರ  ಈ ಆದೇಶ ಹೊರಡಿಸಿದ್ದಾರೆ.ಸರ್ಜಾಪುರ ಸೋಮೇಶ್ವರ ದೇವಾಲಯದ ಸಮೀಪ ಎತ್ತುಗಳ ಓಟದ ಸ್ಪರ್ದೆಯನ್ನು  ಮಂಗಳವಾರ ನಡೆಸಲು ಗ್ರಾಮಸ್ಥರು ಸಿದ್ದತೆ ನಡೆಸಿದ್ದರು. ಅನುಮತಿಗಾಗಿ ಪೊಲೀಸರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.ಮುಳಬಾಗಿಲಿನಲ್ಲಿ ಎತ್ತುಗಳ ಓಟದ ಸ್ಪರ್ಧೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಎತ್ತುಗಳ ಓಟದ ಸ್ಪರ್ಧೆಯಿಂದ (ಜಲ್ಲಿಕಟ್ಟು) ಆಗಬಹುದಾದ ಅನಾಹುತವನ್ನು ತಡೆಗಟ್ಟುವ ಸಲುವಾಗಿ  ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry