ಭಾನುವಾರ, ಏಪ್ರಿಲ್ 18, 2021
33 °C

ಸರ್ವಶ್ರೇಷ್ಠ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ವಶ್ರೇಷ್ಠ ಪ್ರಶಸ್ತಿ ಪ್ರದಾನ

ಬಾಗಲಕೋಟೆ: ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆ ಮತ್ತು ಬಾಗಲಕೋಟೆಯ ಸರ್ವಶ್ರೇಷ್ಠ ಕ್ರಿಯೇಷನ್ ಸಾಂಸ್ಕೃತಿಕ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನವನಗರದ ಕಲಾಭವನದಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಚಲನಚಿತ್ರ ಸಾಧಕರಿಗೆ `ಸರ್ವಶ್ರೇಷ್ಠ ಕಲಾಭೂಷಣ -2011~ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಹಿರಿಯ ನಟ ಸದಾಶಿವ ಬ್ರಹ್ಮಾವರ, ಕರಿಸುಬ್ಬು, ಸಾಹಸ ನಿರ್ದೇಶಕ ಕೌರವ ವೆಂಕಟೇಶ್, ಖ್ಯಾತ ಹಿನ್ನೆಲೆ ಗಾಯಕ ರಮೇಶ್ವಂದ್ರ, ಸುಜಾತ ದತ್, ವಿಜಯ ಅರಸ್, ನೃತ್ಯ ನಿರ್ದೇಶಕ ತ್ರಿಭುವನ್, ನಟ ಅಶೋಕ ಬಾದರದಿನ್ನಿ, ನಟಿ ಋತಿಕಾ, ನೃತ್ಯಗಾರ್ತಿ ಶಮಾ ಕೃಷ್ಣ, ಛಾಯಾಗ್ರಾಹಕ ರೇಣುಕುಮಾರ ಸೇರಿದಂತೆ 20ಕ್ಕೂ ಅಧಿಕ ಚಲನಚಿತ್ರ ರಂಗದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ನಟ ಸದಾಶಿವ ಬ್ರಹ್ಮಾವರ ಮಾತನಾಡಿ, ವರನಟ ಡಾ.ರಾಜ್‌ಕುಮಾರ್ ಪ್ರೋತ್ಸಾಹದಿಂದ ಸಿನಿಮಾ ರಂಗದಲ್ಲಿ ಬೆಳೆಯಲು ಸಾಧ್ಯವಾಯಿತು ಎಂದು ಸ್ಮರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಬಾಬು, ತಬ್ಬಲಿ ಮಕ್ಕಳಿಗೆ ಆಶ್ರಯ ಒದಗಿಸುವ ಉದ್ದೇಶದಿಂದ ನೂತನವಾಗಿ ಅನಾಥಾಶ್ರಮ ಆರಂಭಿಸುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.ಶಾಸಕ ವೀರಣ್ಣ ಚರಂತಿಮಠ, ಎಂ.ಕೆ.ಪಟ್ಟಣಶೆಟ್ಟಿ, ಮುಖಂಡರಾದ ಸಂತೋಷ ಹೊಕ್ರಾಣಿ, ಮಹಾಂತೇಶ ಮಮದಾಪುರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಕೆ.ನಂದನೂರ, ಸಿಂಡಿಕೇಟ್ ಬ್ಯಾಂಕ್‌ವ್ಯವಸ್ಥಾಪಕ ಕೆ.ವಸಂತಕುಮಾರ, ಬಾದಾಮಿಯ ಇಷ್ಠಲಿಂಗ ಸಿರಸಿ, ಆನಂದ ಕುಲಕರ್ಣಿ, ರಮೇಶ ಬಡಿಗೇರ, ಮನೋಹರ ಕದಂ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಮಹಾಲಿಂಗಾಪುರದ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಸಿದ್ದನಕೊಳ್ಳದ ಡಾ.ಶಿವಕುಮಾರ ಸ್ವಾಮೀಜಿ, ಹಜರತ್ ಮಹಮ್ಮದ್ ಯೂಸೂಫ್ ಬೇಪಾರಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.