ಬೆಂಗಳೂರು: ಬಸವೇಶ್ವರನಗರ ಮತ್ತು ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳು ಇಬ್ಬರು ಮಹಿಳೆಯರ ಚಿನ್ನದ ಸರಗಳನ್ನು ದೋಚಿದ್ದಾರೆ.
ಬಸವೇಶ್ವರನಗರ ಸಮೀಪದ ಮಹಾಗಣಪತಿ ನಗರದಲ್ಲಿ ಓಬಳಮ್ಮ ಎಂಬುವರ ಸರವನ್ನು ದೋಚಲಾಗಿದೆ.

ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಮನೆ ಮುಂದಿರುವ ಕೊಳಾಯಿಯಲ್ಲಿ ನೀರು ಹಿಡಿಯುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ 46 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಸರದ ಮೌಲ್ಯ 60 ಸಾವಿರ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮತ್ತೊಂದು ಪ್ರಕರಣದಲ್ಲಿ ದುಷ್ಕರ್ಮಿಗಳು ಜಯನಗರದ ನಾಲ್ಕನೇ ಟಿ ಬ್ಲಾಕ್ ನಿವಾಸಿ ರಾಜಮ್ಮ ಎಂಬುವರ 16 ಗ್ರಾಂ ತೂಕದ ಚಿನ್ನದ ಸರವನ್ನು ದೋಚಿದ್ದಾರೆ.

ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಮನೆ ಸಮೀಪದ ಹಾಲಿನ ಕೇಂದ್ರದಿಂದ ಹಾಲು ತರುತ್ತಿದ್ದ ವೇಳೆ ಅವರನ್ನು ಹಿಂಬಾಲಿಸಿದ ಇಬ್ಬರು ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ 30 ಸಾವಿರ ರೂಪಾಯಿ ಮೌಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.