ಸರ ದೋಚಿ ಪರಾರಿ

7

ಸರ ದೋಚಿ ಪರಾರಿ

Published:
Updated:

ಬೆಂಗಳೂರು: ಮಹಿಳೆಯೊಬ್ಬರ ಚಿನ್ನದ ಸರವನ್ನು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕುಮಾರಸ್ವಾಮಿಲೇಔಟ್‌ನ ಇಸ್ರೊ ಬಡಾವಣೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.ರುಕ್ಮಿಣಮ್ಮ ಸರ ಕಳೆದುಕೊಂಡವರು. ಇಸ್ರೊ ಲೇಔಟ್ ನಿವಾಸಿಯಾದ ಅವರು ಚಂದ್ರಾನಗರದಲ್ಲಿ ಮನೆ ಕಟ್ಟಿಸುತ್ತಿದ್ದಾರೆ. ಚಂದ್ರಾನಗರದಿಂದ ಮನೆಗೆ ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ. ಸರ 38 ಗ್ರಾಂ ತೂಕದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಕುಮಾರಸ್ವಾಮಿಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry