ಬುಧವಾರ, ಮೇ 18, 2022
21 °C

ಸಲ್ಮಾನ್ ಬಟ್ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಐಎಎನ್‌ಎಸ್): ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದ ಕಾರಣ ಜೈಲು ಶಿಕ್ಷೆಗೆ ಗುರಿಯಾಗಿದ್ದ ಪಾಕಿಸ್ತಾನ ತಂಡದ ಮಾಜಿ ನಾಯಕ ಸಲ್ಮಾನ್ ಬಟ್ ಅವರನ್ನು ಗುರುವಾರ ಬಿಡುಗಡೆ ಮಾಡಲಾಗಿದೆ.ಮೂವತ್ತು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದ್ದರೂ ಈ ಅವಧಿಯಲ್ಲಿ ಕೇವಲ ಏಳು ತಿಂಗಳ ಸೆರೆವಾಸವನ್ನು ಬಟ್ ಪೂರ್ಣಗೊಳಿಸಿದ್ದಾರೆ. ಆದರೂ ಅವರನ್ನು ಬಿಡುಗಡೆ ಮಾಡಿದ್ದು, ಪಾಕಿಸ್ತಾನಕ್ಕೆ ಕಳುಹಿಸಿ ಕೊಡಲು ವ್ಯವಸ್ಥೆ ಮಾಡಲಾಗಿದೆ.ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಪಾಕಿಸ್ತಾನದ ಮೂವರು ಕ್ರಿಕೆಟಿಗರು ಶಿಕ್ಷೆಗೊಳಗಾಗಿದ್ದರು. ಅವರಲ್ಲಿ ಮೊಹಮ್ಮದ್ ಆಸಿಫ್ ಹಾಗೂ ಮೊಹಮ್ಮದ್ ಅಮೆರ್ ಈ ಮೊದಲೇ ಬಿಡುಗಡೆ ಹೊಂದಿದ್ದಾರೆ.`ಕೈದಿಗಳ ಬಿಡುಗಡೆಯ ವಿಷಯದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಅದು ನಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಇಲ್ಲ~ ಎಂದು ಜೈಲಿನ ವಕ್ತಾರರು ತಿಳಿಸಿದ್ದಾರೆ.ವಿದೇಶಿ ಕೈದಿಗಳ ನಿಯಮದ ಪ್ರಕಾರ ಶಿಕ್ಷೆಯ ಅವಧಿಯ ಕೊನೆಯ ಒಂಬತ್ತು ತಿಂಗಳು ಬಾಕಿ ಇರುವಾಗ ಬಿಡುಗಡೆಗೆ ಅವಕಾಶ ಇದೆ. ಆದರೆ ಪಾಕ್ ಕ್ರಿಕೆಟಿಗರ ವಿಷಯದಲ್ಲಿ ಆ ನಿಯಮವನ್ನು ಮೀರಲಾಗಿದೆ. ಆದರೆ ಬಿಡುಗಡೆಯಾದ ಕೈದಿಗಳನ್ನು ಇಂಗ್ಲೆಂಡ್‌ನಿಂದ ಹೊರಗೆ ಹಾಕುವ ನಿಯಮವನ್ನು ಕಟ್ಟುನಿಟ್ಟಿನಿಂದ ಪಾಲಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.